Home Posts tagged #congress (Page 12)

ಉಮಾನಾಥ್ ಕೋಟ್ಯಾನ್‍ಗೆ ಬೇನಾಮಿ ಆಸ್ತಿ : ಮಿಥುನ್ ರೈ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ

ಏ.20ರಂದು ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.20ರಂದು ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಪಕ್ಷ, ಸರ್ವ ಜಾತಿ ಧರ್ಮವನ್ನು ಪ್ರೀತಿಸುವ ಪಕ್ಷವಾಗಿದೆ. ದೇಶವು ಅಭವೃದ್ಧಿ

ಬಿಜೆಪಿಯವರು ಗೆಲುವಿನ ಭ್ರಮೆ ಇಟ್ಟುಕೊಂಡಿದ್ರೆ ಸತ್ಯಕ್ಕೆ ದೂರವಾದ ವಿಚಾರ : ಮಾಜಿ ಎಮ್‍ಎಲ್‍ಸಿ ಐವನ್ ಡಿಸೋಜಾ

ದ.ಕ ಮತ್ತು ಉಡುಪಿಯಲ್ಲಿ 2013 ರ ಚರಿತ್ರೆ ಮರುಕಳಿಸಲಿದೆ. ಬಿ.ಜೆ.ಗೆ 2018ರಲ್ಲಿ ಮತ ಹಾಕಿದವರು ಇದೀಗ ಪಶ್ಚತ್ತಾಪಪಡುತ್ತಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ, ಬಿ.ಜೆ.ಪಿಯವರು ಭ್ರಮೆ ಇಟ್ಟು ಕೊಂಡಿದ್ದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023 ರ ಚುನಾವಣೆಯಲ್ಲಿ ಮಂಗಳೂರು

ಬಂಟ್ವಾಳದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಕೆ

ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಟ್ಲ, ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ ರಾಜಾರಾಮ್‌,

ಧರ್ಮಸ್ಥಳಕ್ಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಭೇಟಿ

ಧರ್ಮಸ್ಥಳಕ್ಕೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ,ಕೃಷ್ಣಪ್ಪ ಅವರು ಧರ್ಮಸ್ಥಳಕ್ಕೆ ಆಗಮಿಸಿ ನೀಡಿ ಹೆಗ್ಗಡೆಯವರ ಭೇಟಿ ನೀಡಿದರು. ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಸುಳ್ಯ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ, ನಿರುದ್ಯೋಗ ಸಮಸ್ಯೆ, ಎಲೆ ಚುಕ್ಕಿ ರೋಗ ಇಂಥ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ