Home Posts tagged #congress (Page 15)

ಬಂಟ್ವಾಳದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್,

ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಕೆ

ಪುತ್ತೂರು :ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್‌ ಕುಮಾರ್‌ ರೈ ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಹಾರಾರ್ಪಣೆ ಮಾಡಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ, ವಿಟ್ಲ, ಉಪ್ಪಿನಂಗಡಿ ಬ್ಲಾಕ್‌ ಅಧ್ಯಕ್ಷ ಡಾ ರಾಜಾರಾಮ್‌,

ಧರ್ಮಸ್ಥಳಕ್ಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ಭೇಟಿ

ಧರ್ಮಸ್ಥಳಕ್ಕೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ,ಕೃಷ್ಣಪ್ಪ ಅವರು ಧರ್ಮಸ್ಥಳಕ್ಕೆ ಆಗಮಿಸಿ ನೀಡಿ ಹೆಗ್ಗಡೆಯವರ ಭೇಟಿ ನೀಡಿದರು. ನಂತರ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಂತರ ಮಾತನಾಡಿದ ಅವರು ಸುಳ್ಯ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ದಿ ಆಗಿಲ್ಲ, ನಿರುದ್ಯೋಗ ಸಮಸ್ಯೆ, ಎಲೆ ಚುಕ್ಕಿ ರೋಗ ಇಂಥ ಸಮಸ್ಯೆಗಳಿಗೆ ಪರಿಹಾರ ನೀಡಲು ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಸುಳ್ಯ : ಕಾಂಗ್ರೆಸ್ ಅಭ್ಯರ್ಥಿ ಜಿ. ಕೃಷ್ಣಪ್ಪ ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಯ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರು ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಅರುಣಕುಮಾರ ಸಂಗಾವಿ ಅವರಿಗೆ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಪಿ.ಸಿ.ಸಿ. ವಕ್ತಾರ ಟಿ.ಎಂ. ಶಹೀದ್ ಮೊದಲಾದ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ

ನನ್ನನ್ನು ಅಪಪ್ರಚಾರದಿಂದ ಸೋಲಿಸಿದ್ದಾರೆ : ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ: ಎ.20 ರಂದು ಗುರುವಾರ ಮಧ್ಯಾಹ್ನ 12.35ಕ್ಕೆ ನಾಮಪತ್ರ ಸಲ್ಲಿಸುವುದಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಪಕ್ಷದ ಚುನಾವಣಾ ಕಚೇರಿಯಲ್ಲಿ ಸೋಮವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಬಂಟ್ವಾಳದ ಶ್ರೀ ವೆಂಕಟರಮಣ ದೇವಾಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋರ ಚುನಾವಣಾ ಕಚೇರಿ ಉದ್ಘಾಟನೆ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರ ಚುನಾವಣಾ ಕಚೇರಿಯಯು ಸರ್ವಧರ್ಮದ ಮುಖಂಡರಿಂದ ಉದ್ಘಾಟನೆಗೊಂಡಿತ್ತು, ನಗರದ ನಂತೂರು ರಸ್ತೆಯಲ್ಲಿರುವ ಜಿಮ್ಮಿಸ್ ಸೂಪರ್ ಮಾರ್ಕೇಟ್ ಸಂಕೀರ್ಣದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆಗೊಂಡಿತ್ತು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು, ಮುಂದಿನ ದಿನಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉತ್ತಮ ಸರ್ಕಾರ ರಚನೆಗೆ ನಿಮ್ಮೆಲ್ಲರ ಸಹಕಾರ

ಕಾರ್ಕಳದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾರ್ಕಳ, ಈ ಸಲದ ಚುನಾವಣೆ ಕೌರವರ ಹಾಗೂ ಪಾಂಡವರ ಯುದ್ಧ, ಸತ್ಯದ ಮತ್ತು ಸುಳ್ಳಿನ ನಡುವಿನ ಯುದ್ಧ ವಾಗಿದೆ. ಈ ಸಲದ ಚುನಾವಣೆಯಲ್ಲಿ ಸತ್ಯಕ್ಕೆ ಜಯ ಸಲ್ಲುವುದು ಗ್ಯಾರಂಟಿಯಾಗಿರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರುವುದು ಖಚಿತ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಳು ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ ತಮ್ಮ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಎಚ್.

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. 43 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಂ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಕುತೂಹಲ ಕೆರಳಿಸಿದ್ದ ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕಾರ್ಕಳ ಕ್ಷೇತ್ರಕ್ಕೆ ಉದಯ್ ಕುಮಾರ್

ಬೆಳುಪು : ಗ್ರಾಮೀಣ ಕಾಂಗ್ರೆಸ್ ಕಛೇರಿ ಉದ್ಘಾಟನೆ

ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪಲಿಮಾರು, ಮುದರಂಗಡಿ, ಬೆಳಪು, ಕುತ್ಯಾರು, ಎಲ್ಲೂರು, ಶಿರ್ವ ಹಾಗೂ ಮೂಡಬೆಳ್ಳೆಗಳಲ್ಲಿ ಕಛೇರಿಯನ್ನು ಉದ್ಘಾಟಿಸಲಾಗಿದ್ದು, ಮುಂದಿನ 18ನೇ ತಾರೀಖು ಹತ್ತು ಗಂಟೆಗೆ ಕಾಪು ಜನಾರ್ದನ