Home Posts tagged #congress (Page 18)

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು

ಉಳ್ಳಾಲ ನಗರಸಭೆಯ 2023-24ನೇ ಸಾಲಿನ ಬಜೆಟ್ : ನಗರಸಭೆಯ ಸದಸ್ಯರ ನಡುವೆ ನೂಕಾಟ, ತಳ್ಳಾಟ

ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್‍ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್‍ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು.ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ನ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತರೂಢ ಕಾಂಗ್ರೆಸ್

ಎಂ.ಎಸ್. ರಕ್ಷಾ ರಾಮಯ್ಯಗೆ ಏಐಸಿಸಿ ಸದಸ್ಯತ್ವ

ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಏಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ

ತಲಪಾಡಿ : ನೀರು ಪೂರೈಕೆಗೆ ಒತ್ತಾಯಿಸಿ ಕಾಂಗ್ರೆಸ್ ಮನವಿ

ತಲಪಾಡಿ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಕೆಲವೆಡೆಗೆ ಬಟ್ಟಪಾಡಿ ಪ್ರದೇಶದಿಂದ ನೀರಿನ ಪೈಪ್ ಲೈನ್ ಇದ್ದರೂ ನೀರು ಸರಬರಾಜು ಆಗುತ್ತಿಲ್ಲ. ಪೈಪ್ ಲೈನ್ ಇಲ್ಲದಿರುವ ಕೆಸಿ ರೋಡ್, ಪಳ್ಳ, ಪೂಮಣ್ಣು, ಕೆಸಿ ನಗರ, ಶಾಂತಿ

ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ವಿರುದ್ಧ ಕಿಡ್ನ್ಯಾಪ್ ಪ್ರಕರಣ ದಾಖಲು

ತನ್ನ ಅಳಿಯನನ್ನೇ ಅಪಹರಣ ಮಾಡಿ ಆಸ್ಪತ್ರೆಗೆ ದಾಖಲಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಆರೋಪದ ಮೇಲೆ ಪುತ್ತೂರು ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಹಾಗೂ ಅವರ ಕುಟುಂಬದ ಐವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದಿವ್ಯಪ್ರಭಾ ಅವರ ವಿರುದ್ದ ಅವರ ಅಳಿಯ ನವೀನ್ ಗೌಡ ಅವರು ದೂರು ನೀಡಿದ್ದು, ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ದಿವ್ಯಪ್ರಭಾ ಹಾಗೂ ಮಗಳು ಸ್ಪಂದನಾ , ಪರಶುರಾಮ್ ,

ಸರ್ಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದೆ : ಯು.ಟಿ. ಖಾದರ್

ರಾಜ್ಯದ ಸಂಸದರ ಮೌನ, ಸರಕಾರದ ಅಸಹಾಯಕತೆ, ಕೇಂದ್ರ ಸರಕಾರದ ಮಲತಾಯಿ ಧೋರಣೆಯಿಂದಾಗಿ ರಾಜ್ಯದ ಜನತೆ ಸಾಲದ ಹೊರೆಯಲ್ಲಿ ಹೊತ್ತುಕೊಳ್ಳುವಂತಾಗಿದೆ. ರಾಜ್ಯ ಸರಕಾರ ಮಂಡಿಸಿದ್ದು ಸುಲಿಗೆ, ಸಾಲದ ಬಜೆಟ್ ಆಗಿದೆ ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊನೆಯ ಉಸಿರೆಳೆಯುತ್ತಿರುವ ಸರಕಾರ ಮಹತ್ವವಿಲ್ಲದ ಬಜೆಟ್ ಮಂಡಿಸಿದ್ದು, ಜನತೆಯನ್ನು ಸಾಲದಲ್ಲಿ ಮುಳುಗಿಸಿದೆ

ಕಾಂಗ್ರೆಸ್ ಕಾರ್ಯಕರ್ತರಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ : ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರ ಪುನರುಚ್ಚಾರ

ಕಾರ್ಕಳ: ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲದ ಐದನೇ ಅಭ್ಯರ್ಥಿಗೆ ಟಿಕೆಟ್ ನೀಡುವ ಪ್ರಶ್ನೆಯೇ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಜಯಶಾಲಿಯಾಗಲಿದ್ದೇವೆ ಎಂದು ಕಾರ್ಕಳ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ನೀರೆ ಕೃಷ್ಣ ಶೆಟ್ಟಿ, ಮಂಜುನಾಥ್ ಪೂಜಾರಿ ಮುದ್ರಾಡಿ, ಡಿ ಆರ್ ರಾಜು, ಸುರೇಂದ್ರ ಶೆಟ್ಟಿ ಪುನರುಚ್ಚರಿಸಿದ್ದಾರೆ. ಕಾರ್ಕಳ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹೆಬ್ರಿ ಬ್ಲಾಕ್

ಅಶ್ವತ್ಥ್ ನಾರಾಯಣ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಲಿದೆ : ಐವನ್ ಡಿಸೋಜ

ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು

ಫೆ.5ರಿಂದ 9ರ ವರೆಗೆ ಕರಾವಳಿಯಲ್ಲಿ ಪ್ರಜಾಧ್ವನಿ ಯಾತ್ರೆ

ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆ ಫೆ.5ರಂದು ಸುಳ್ಯದಿಂದ ಆರಂಭಗೊಂಡು ಫೆ.6ರಂದು ಮೂಡಬಿದಿರೆ, ಫೆ.7ರಂದು ಕಾಪು, ಫೆ.8ರಂದು ಕುಂದಾಪುರ, ಫೆ.9ರಂದು ಶೃಂಗೇರಿ ತಲುಪಲಿದೆ ಎಂದರು.

ಕುರುಡು ಮಲೈನಲ್ಲಿ ಜ.3 ರಿಂದ ಡಿ.ಕೆ. ಶಿವಕುಮಾರ್ ಅವರ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆ : ಪೂರ್ವ ಸಿದ್ಧತಾ ಸಭೆ ನಡೆಸಿದ ಮಾಜಿ ಸಚಿವ ಎಂ.ಆರ್. ಸೀತಾರಾಂ

ಬೆಂಗಳೂರು, ಜ, 30; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪದ ಕುರುಡು ಮಲೈನಲ್ಲಿ ಫೆ. 3 ರಿಂದ ಆರಂಭಿಸಲಿರುವ ಎರಡನೇ ಹಂತದ “ಪ್ರಜಾಧ್ವನಿ” ಯಾತ್ರೆಯ ಯಶಸ್ಸಿಗಾಗಿ ಮಾಜಿ ಸಚಿವ ಎಂ.ಆರ್. ಸೀತಾರಾಂ ಇಂದು ಪೂರ್ವಭಾವಿ ಸಭೆ ನಡೆಸಿದರು. ಎಂ.ಅರ್. ಸೀತಾರಾಂ ಅವರನ್ನು ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರನ್ನಾಗಿ ಡಿ.ಕೆ. ಶಿವಕುಮಾರ್ ಅವರು ನೇಮಿಸಿದ್ದು, ಈ ಹಿನ್ನೆಲೆಯಲ್ಲಿ ಅವರು “ಪ್ರಜಾಧ್ವನಿ”