Home Posts tagged #congress (Page 5)

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್

ಉಳ್ಳಾಲದ ಮನೆಯೊಂದಕ್ಕೆ 7 ಲಕ್ಷ ರೂ. ವಿದ್ಯುತ್ ಬಿಲ್ : ಬಿಲ್ ರೀಡರ್ ನ ಎಡವಟ್ಟು

ಕೆಇಆರ್‍ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್‍ನ ಮನೆಯೊಂದಕ್ಕೆ ಬರೋಬರಿ 7 ಲಕ್ಷ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್‍ನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ಬಿಲ್ಲನ್ನ ನೀಡಿ ತೆರಳಿದ್ದಾನೆ. ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ

ಜುಲೈ 3 ರಿಂದ ಕಾಂಗ್ರೆಸ್ ಸರಕಾರದ ವಿಧಾನಸಭೆ ಅಧಿವೇಶನ

ಕಾಂಗ್ರೆಸ್ ಸರಕಾರದ ವಿಧಾನಸಭೆ ಅಧಿವೇಶನವು ಜುಲೈ 3 ರಿಂದ 14 ರವರೆಗೆ ನಡೆಯಲಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆದೇಶ ನೀಡಿದ್ದಾರೆಅಧಿವೇಶನದ ಮೊದಲ ದಿನ ಉಭಯ ಸಧನವನ್ನು ಉಧ್ದೇಶಿಸಿ ರಾಜ್ಯಪಾಲರು ಬಾಷನ ಮಾಡಲಿದ್ದಾರೆ, ಶಾಸಕರಿಗೆ ಪ್ರಶ್ನೆಗಳ ಸೂಚನ ಪತ್ರವನ್ನು ಸದನಕ್ಕೆ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ

ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಯುಧಗಳಿಂದ ಹಲ್ಲೆಗೆ ಯತ್ನ : ನಟೋರಿಯಸ್ ಕ್ರಿಮಿನಲ್ ಗಳಿಗೆ ಸುಪಾರಿ ನೀಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ

ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ

ಕಾಂಗ್ರೆಸ್ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ : ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಘೋಷಣೆ ಮಾಡಿದ್ದು, ನಾನು ಸ್ವಾಗತಿಸುತ್ತೇನೆ. ಆದರೆ ಇದಕ್ಕೆ ಹಣದ ಮೂಲ, ಹಣದ ಕ್ರೋಢೀಕರಣ, ಎಷ್ಟು ವರ್ಷ ಇರುತ್ತದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಫಲಿತಾಂಶದ 24 ಗಂಟೆ ಅಂತ ಹೇಳಿ ಜನಾಕ್ರೋಶದ ಬಳಿಕ ತಡವಾಗಿ ಗ್ಯಾರೆಂಟಿ ಘೋಷಣೆ ಮಾಡಿದ್ದಾರೆ. ನಿರುದ್ಯೋಗ ಭತ್ಯೆಗೆ ಮಾನದಂಡ ಹಾಕಿದ್ದಾರೆ, ಮೊದಲು ಮಾನದಂಡದ ಬಗ್ಗೆ

ಚುನಾವಣೆ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಹೆಚ್ಚಿದ ಜವಾಬ್ದಾರಿ : ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಂಗಳವಾರ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಗ್ಯಾರಂಟಿಯಿಂದ ವಂಚಿಸಬೇಡಿ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ

ದೆಹಲಿಯ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ : ಕವಿತಾ ಸನಿಲ್ ಆಕ್ರೋಶ

ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಮೋದಿ ಸರ್ಕಾರ ಹಾಗೂ ದೆಹಲಿ ರಾಜ್ಯ ಸರ್ಕಾರ ಕ್ರೀಡಾಪಟುಗಳ ಮೇಲೆ ದೌರ್ಜನ್ಯ ಮಾಡಿರುವುದು ಸರಿಯಲ್ಲ. ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳ

ದಾಖಲೆಗಾಗಿ ಅಲೆದಾಡಿಸುತ್ತಿದ್ದ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು : ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ತೆರಳಿದ್ದರು. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ