Home Posts tagged #congress (Page 8)

Mangaluru : ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಆರೋಪ – ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ || Minister Dinesh Gundurao visited Dharamsthala

ದ.ಕ ಜಿಲ್ಲಾ ಪ್ರವಾಸ ಕೈಗೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದುಕೊಂಡರು.ಸಚಿವರ ಜೊತೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಕೂಡಾ ಇದ್ದರು.

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ

ಸುಳ್ಯದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ – ದೈವಗಳ ಮೊರೆ ಹೋದ ಕಾಂಗ್ರೆಸ್ ಮುಖಂಡರು

ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ.ಜಿ ಅವರ ವಿರುದ್ದ ಕೆಲಸ ಮಾಡಿದ ಆರೋಪದಲ್ಲಿ ಪಕ್ಷದಿಂದ ಉಚ್ಚಾಲಿಸಲ್ಪಟ್ಟ ಕಾಂಗ್ರೆಸ್ ಮುಖಂಡರು ಇದೀಗ ದೈವದ ಮೊರೆ ಹೋಗಿದ್ದಾರೆ. ಪ್ರಸಿದ್ದ ಕಾರಣಿಕ ಕ್ಷೇತ್ರ ಕೋಡಿಂಬಾಳ ಗ್ರಾಮದ ಮಜ್ಜಾರು ರಾಜನ್ ದೈವದ ಸಾನಿಧ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಬಾಲಕೃಷ್ಣ ಬಳ್ಳೇರಿ, ಸುಧೀರ್ ದೇವಾಡಿಗ, ಉಷಾ ಆಂಚನ್ ನೆಲ್ಯಾಡಿ, ಆಶಾ ಲಕ್ಷ್ಮಣ್ ಗುಂಡ್ಯ ಅವರುಗಳು ದೈವಗಳ ಎದುರು ಪ್ರಾರ್ಥಿಸಿಕೊಂಡಿದ್ದಾರೆ.

ಬಿಜೆಪಿಯಲ್ಲಿ ಮನೆಯೊಂದು 10 ಬಾಗಿಲು ಎಂಬಂತಾಗಿದೆ : ಮಂಗಳೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಟೀಕೆ

ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಉದ್ಭವಿಸಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರದ ವರಿಷ್ಠರಿಗೂ ಸಾಧ್ಯವಾಗದ

ಬಿಪಿಎಲ್ ಪಡಿತರ ಕಾರ್ಡ್‍ದಾರರ ಖಾತೆಗೆ 170 ರೂ !!

ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ನೀಡುತ್ತಿದ್ದು, ಉಳಿದ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ 170 ರೂ. ನೀಡಲು ತೀರ್ಮಾನ

bantwala : ಗುಡಿಸಲಲ್ಲಿ ವಾಸವಾಗಿದ್ದ ಬಡ ಕುಟುಂಬಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ಮನೆ ನಿರ್ಮಾಣ

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಪರಿಶಿಷ್ಠ ಜಾತಿ ಸಮುದಾಯಕ್ಕೆ ಸೇರಿದ ಬಾಡ ಹಾಗೂ ನೊಕ್ಕೆ ದಂಪತಿ ಕುಟುಂಬ

ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕೋಟ್ಯಂತರ ರೂಪಾಯಿ ವಂಚನೆಯ ಆರೋಪ : ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಸ್ಪಷ್ಟನೆ

ಉಡುಪಿ : “ವೈಜ‌ರ್” ವಸತಿ ಸಮುಚ್ಚಯದ ಫ್ಲಾಟ್ ಮಾರಾಟದಲ್ಲಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ವಿವಾದಕ್ಕೆ ಸಂಬಂಧಿಸಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಸತಿ ಸಮುಚ್ಚಯ ನಿರ್ಮಾಣಕ್ಕಾಗಿ ಬ್ಯಾಂಕಿನಿಂದ 5.4 ಕೋಟಿ ಸಾಲ ಪಡೆದುಕೊಂಡಿದ್ದು, ಈವರೆಗೆ ನಾನು 6 ಕೋಟಿ ರೂ. ಬ್ಯಾಂಕಿಗೆ ಪಾವತಿಸಿದ್ದೇನೆ. ಇದೀಗ ಬ್ಯಾಂಕ್ ಮತ್ತೆ 5 ಕೋಟಿ ರೂ. ಸಾಲ ಇದೆ ಎಂಬುದಾಗಿ ಹೇಳುತ್ತಿದೆ. ಈ ಬಗ್ಗೆ 2.5 ಕೋಟಿ ರೂ.

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್