Home Posts tagged #congress (Page 9)

ಉಡುಪಿ : ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮನೆಮನೆಗೆ ತೆರಳಿ ಮತಯಾಚನೆ

ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್

ಕಣ್ಣಿಗೆ ಕಾಣುವ ದೇವತಾ ಮನುಷ್ಯ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು : ನ್ಯಾಯವಾದಿ ಚಂದ್ರಶೇಖರ ಪೂಜಾರಿ

ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಮುವಾದಿ ಪಕ್ಷಗಳಾದ ಬಿಜೆಪಿ ಮತ್ತು ಎಸ್.ಡಿ.ಪಿ.ಗೆ ಮತ ಹಾಕಿದರೆ

ಧಾರ್ಮಿಕ ಕೇಂದ್ರ ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ: ಶುಭದ ರಾವ್

ಧಾರ್ಮಿಕ ಕೇಂದ್ರಗಳು ಭಕ್ತರ ಆಸ್ತಿಯೇ ಹೊರತು ಪಕ್ಷದ ಆಸ್ತಿ ಅಲ್ಲ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶುಭದ ರಾವ್ ಹೇಳಿದರು. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.  ಕಾರ್ಕಳ ಮಾರಿಗುಡಿಯ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವವು ದೇವಿಯ  ಇಚ್ಚೆಯಂತೆ  ಭಕ್ತಾಭಿಮಾನಿಗಳು ಹಾಗೂ ದಾನಿಗಳ ಸಹಕಾರದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಆದರೆ ತಾವೂ ಮತ್ತು ತಮ್ಮ ಹಿಂಬಾಲಕರು ದೇವಳದ

ಸುಳ್ಳು ಭರವಸೆಯನ್ನು ಕೊಡುವುದಿಲ್ಲ, ಕೊಟ್ಟ ಮಾತಿಗೆ ತಪ್ಪಲಾರೆ : ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು

ಮೂಡಬಿದ್ರೆ : ಮಿಥುನ್ ರೈ ವಿವಿಧೆಡೆ ಮತಯಾಚನೆ

ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಮಿಥುನ್ ರೈ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿ, ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪಿ ಹಾಗೂ ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರ ಬಾಂಧವರನ್ನು ಭೇಟಿ ಮಾಡಿ ಮತಯಾಚನೆಯನ್ನು ನಡೆಸಿದರು.

ಮಲ್ಪೆ : ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್

ಉಡುಪಿಯ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಮಲ್ಪೆಯಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಇದೇ ವೇಳೆ ಮಲ್ಪೆಯ ಮೀನುಗಾರ ಮಹಿಳೆಯರ ಕಷ್ಟಗಳನ್ನು ಆಲಿಸಿದರು.ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಕ್ಷವು ಸುಳ್ಳು ಭರವಸೆಯನ್ನು ನೀಡಿ ಮತ ಪಡೆದು ಯಾವ ಕೆಲಸವನ್ನು ಮಾಡದೆ ಮೋಸ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ಗೆದ್ದು ನಾನು ಶಾಸಕನಾದರೆ ಮೀನುಗಾರರ ಸಮಸ್ಯೆಗಳಾದ ಪಾರ್ಕಿಂಗ್ ವ್ಯವಸ್ಥೆ , ಶೌಚಾಲಯ, ಮೀನು ಮಾರಾಟಕ್ಕೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿಗರು ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಉಚಿತ ಅಕ್ಕಿ ಕೊಟ್ಟಾಗ ಇಂತಹುದೇ ಮಾತುಗಳನ್ನಾಡುತ್ತಿದ್ದರು. ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರಿಂದ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮತಯಾಚನೆ

ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಯ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮನೆ ಮನೆಗೆ ಬೇಟಿ ನೀಡಿ ಮತಯಾಚಿಸಿದರು

ಕಡಬ: ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್‌ಗೆ ಗೆಲುವು ನಿಶ್ಚಿತ: ಎಐಸಿಸಿ ಸದಸ್ಯ ಸುನಿಲ್ ಕೇದಾರ್

ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿನ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲಗಳು ಶಮನಗೊಂಡಿದ್ದು, ಪಕ್ಷದ ಎಲ್ಲಾ  ನಾಯಕರು ಹಾಗೂ ಕಾರ್ಯಕರ್ತರು ಜೊತೆಯಾಗಿದ್ದು, ಈ ಬಾರಿ ಸುಳ್ಯ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷವು ಅತ್ಯದಿಕ ಮತಗಳಿಂದ ಗೆಲವು ಸಾದಿಸುವುದು ನಿಶ್ಚಿತ ಎಂದು ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ವೀಕ್ಷಕರಾಗಿ ಆಗಮಿಸಿರುವ ಮಹಾರಾಷ್ಟದ ಮಾಜಿ ಸಚಿವ, ಎಐಸಿಸಿ ಸದಸ್ಯ ಸುನಿಲ್ ಕೇದಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ  ಕಡಬ

ನಾವು ಕುಚ್ಚಲಕ್ಕಿ ಕೊಟ್ಟೇ ಕೊಡ್ತೀವಿ : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ ಕಂಬಳಬೆಟ್ಟುವಿನಲ್ಲಿ ರಾತ್ರಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿ ಗೆ ಕುಚ್ಚಲಕ್ಕಿ