ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಕಾಯ್ದೆ ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. ಸಂತರು ಸೇರಿಕೊಂಡು ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ರೆಡಿ ಇದ್ದೇವೆ. ಕಾಯ್ದೆ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವ, ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಸಂತರು ತಿಳಿಸಿದ್ದಾರೆ.
ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ