Home Posts tagged #covid 19

ಕೋವಿಡ್ ನಿಯಂತ್ರಣದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು -ಡಾ.ಕೆ.ವಿ.ರಾಜೇಂದ್ರ

ಮಂಗಳೂರು: ಕೋವಿಡ್ ನಿಯಂತ್ರಣ ಮಾಡಲು ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ಅವರು ಪಣಂಬೂರು ಕೆಐಒಸಿಎಲ್ ಟೌನ್ ಶಿಫ್ ಆವರಣದಲ್ಲಿಂದು ಕೋವಿಡ್ ನಿಯಂತ್ರಣ ಲಸಿಕೆಯ ವಿತರಣಾ ಕಾರ್ಯ ಕ್ರಮ ವನ್ನುದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಲಸಿಕೆ ವಿತರಣಾ

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹೇಳಿದರು. ಅವರು ಪುತ್ತೂರಿನ ತಮ್ಮ ಕಚೇರಿಯಲ್ಲಿ

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಲಸಿಕೆ ನೀಡುವುದರೊಂದಿಗೆ ಲಸಿಕೆ ಮಹತ್ವವನ್ನು ತಿಳಿಸಿದರು. ನಾಡಾ

ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ NRI ಗಳಿಗೆ ಲಸಿಕೆ ನೀಡಲು ಡಿ.ಸಿ ಆದೇಶ: ಅನಿವಾಸಿ ಕನ್ನಡಿಗರಿಂದ ಸ್ವಾಗತ

ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದವು. ವೀಡಿಯೊ ಸಂವಾದದಲ್ಲಿ ಬಹುಮುಖ್ಯವಾಗಿ ಚರ್ಚೆಯಾದ

ಲಸಿಕೆ ನೀಡಲು ಸರ್ಕಾರ ಮೀನಾಮೇಷ: ಐವನ್ ಡಿಸೋಜಾ

ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.  ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಸಿಕೆಯನ್ನು ಪಡೆಯದ ಕಾರಣ ನಮ್ಮವರು ಸತ್ತಿದ್ದಾರೆ ಎಂದು ಹೇಳುವ ಮಂದಿ

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಕಿರು ಸಭಾಂಗಣದಲ್ಲಿ ನಡೆದ ಕೃಷಿ, ತೋಟಗಾರಿಕೆ,

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್‍ನಿಂದ ಅಕ್ಕಿ ವಿತರಣೆ

ಡಾ.ಶಕೀಲ್ ಚಾರಿಟೇಬಲ್ ಟ್ರಸ್ಟ್ ದೇರಳಕಟ್ಟೆ ಇದರ ಆಶ್ರಯದಲ್ಲಿ 3000 ಅರ್ಹ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮವು ದೇರಳಕಟ್ಟೆಯ ನೇತಾಜಿ ಸುಬಾಶ್ಚಂದ್ರಬೋಸ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಪೆÇೀಲಿಸ್ ಠಾಣೆಯ ಅಧಿಕ್ಷಕ ಮಲ್ಲಿಕಾರ್ಜುನ ಬಡ ಕುಟುಂಬಗಳಿಗೆ ಅಕ್ಕಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಬೋಳಾ ನರಿಂಗಾನ ಚರ್ಚ್ ನ ಧರ್ಮ ಗುರು ಫಾದರ್ ಮೈಕಲ್ ಮಾತನಾಡಿ ಕರೊನಾ

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾವಿದರಿಗೆ ಸಹಾಯ ಹಸ್ತ ನೀಡುತ್ತಿರುವುದು ಶ್ಲಾಘನೀಯ ಕೆಲಸ ಎಂದು ಬಿಜೆಪಿ