ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು
ಕೋಡಿಕಲ್ ನಾಗನ ಕಟ್ಟೆಗೆ ಹಾನಿ ಎಸಗಿದ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ, ಕೋಮು ಸೌಹಾರ್ದತೆ ಕದಡಲು ಅವಕಾಶ ನೀಡದಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ನಿಯೋಗ ಉರ್ವ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ವೇಳೆ ನಿಯೋಗದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ಸಿಪಿಐಎಂ ಮಂಗಳೂರೂ ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್,ಉತ್ತರ ಕಾರ್ಯದರ್ಶಿ ಬಶೀರ್ ಪಂಜಿಮೊಗರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಸಿಪಿಐಎಂ
ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು ಪ್ರಸ್ತಾಪದ ಹಿಂದೆ ಬಿಜೆಪಿಯ ಹಿಡೆನ್ ಅಜೆಂಡಾ ಅಡಗಿದೆ. ಮತದಾರರನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಜೊತೆಗೆ ತುಳುನಾಡಿನ ರಾಜಕೀಯ ಇತಿಹಾಸವನ್ನು ಮರೆ ಮಾಚುವ ಹುನ್ನಾರವೂ ಇದರ ಹಿಂದೆ ಇದೆ ಎಂದು ಸಿಪಿಐಎಂ ದ.ಕ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಹೇಳಿದರು. ಅವರು ನಗರದ ಬಜಾಲ್ ನ ಭಗತ್ ಸಿಂಗ್ ಭವನದಲ್ಲಿ ಜರುಗಿದ 23ನೇ ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಉದಾರೀಕರಣ,ಖಾಸಗೀಕರಣ ದೇಶದ ದುಡಿಯುವ ಜನವಿಭಾಗ,ಸಣ್ಣ ವ್ಯಾಪಾರಸ್ಥರು ಸೇರಿದಂತೆ ಬಹುತೇಕರ ಬದುಕುವ ಹಕ್ಕನ್ನೇ ಕಸಿದುಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ವ್ಯಾಪಾರಕ್ಕೆ ಪೂರ್ತಿಯಾಗಿ ತೆರೆದುಕೊಂಡಿದ್ದು ಸಾಮಾನ್ಯ ಜನರಿಗೆ ಕೈಗೆಟುಕದಷ್ಟು ದುಬಾರಿಯಾಗಿದೆ. ಚಪ್ಪಲಿ, ದಿನಸಿ, ತರಕಾರಿ, ಮೀನು ಮಾಂಸದಂತಹ ಚಿಲ್ಲರೆ ವ್ಯಾಪಾರದಲ್ಲೂ ಕಂಪೆನಿಗಳು ಏಕಸ್ವಾಮ್ಯ ಸಾಧಿಸುತ್ತಿದ್ದು ಸಣ್ಣ ಪುಟ್ಟ ಪೇಟೆ ಪಟ್ಟಣಗಳಲ್ಲೂ ತಮ್ಮ ಬೃಹತ್ ಅಂಗಡಿ ಮಳಿಗೆಗಳನ್ನು
ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ನೀತಿಗಳಿಂದ ಜನಸಾಮಾನ್ಯರು ಘನತೆಯಿಂದ ಬದುಕುವ ಹಕ್ಕನ್ನೇ ಕಳೆದುಕೊಳ್ಳುತ್ತಿದ್ದಾರೆ. ಮನಮೋಹನ್ ಸಿಂಗ್ ಸರಕಾರದ ಅವಧಿಯಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧಿಸಿದ್ದ ಖಾಸಗೀಕರಣ, ವ್ಯಾಪಾರೀಕರಣದ ನೀತಿಗಳನ್ನು ಈಗ ರಭಸವಾಗಿ ಜಾರಿಗೆ ತರುವ ಮೂಲಕ ಶಿಕ್ಷಣ, ಆರೋಗ್ಯ, ಉದ್ಯೋಗ ಜನಸಾಮಾನ್ಯರಿಗೆ ನಿಲುಕದಂತಾಗಿದೆ. ದೇಶದ ಸಂಪತ್ತು ಬಹುರಾಷ್ಟ್ರೀಯ ಕಂಪೆನಿಗಳ ಪಾಲಾಗುತ್ತಿವೆ. ಬಿಜೆಪಿ ಸರಕಾರದ ವಿರುದ್ಧ ರೂಪುಗೊಳ್ಳುತ್ತಿರುವ
ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ)ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಈ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದು, ಇಂತಹ ಅವೈಜ್ಞಾನಿಕ ಕರ್ಫೂನಿಂದಾಗಿ ಕೋರೋನ ನಿಯಂತ್ರಣ
CPIM ಪಕ್ಷದ ಹಿರಿಯ ಸದಸ್ಯರೂ, ಬಜಾಲ್ ಜಲ್ಲಿಗುಡ್ಡ ಪ್ರದೇಶದ ನಿವಾಸಿಗಳಾದ ಮೋನಪ್ಪ ಬಂಗೇರರವರು(78 ವರ್ಷ) ದೀರ್ಘಕಾಲದ ಅಸೌಖ್ಯದಿಂದಾಗಿ ಬಜಾಲ್ ಜಲ್ಲಿಗುಡ್ಡೆಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಮೋನಪ್ಪ ಬಂಗೇರರವರು ತಮ್ಮ ಯೌವನದಲ್ಲಿ ಹಂಚು ಕಾರ್ಮಿಕರಾಗಿ ಹಂಚು ಕಾರ್ಮಿಕರ ಅನೇಕ ಹೋರಾಟಗಳಲ್ಲಿ ಸಕ್ರೀಯ ಪಾತ್ರ ವಹಿಸಿದ್ದರು. ಸ್ಥಳೀಯ ಸಂಘ ಸಂಸ್ಥೆಗಳಾದ ಪಕ್ಕಲಡ್ಕ ಯುವಕ ಮಂಡಲ ಹಾಗೂ ಜನತಾ
ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.