Home Posts tagged #dakshinakannada

ದ.ಕ. ಜಿಲ್ಲೆ – ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್‌.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ

ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಬಾಳದಲ್ಲಿ 11.30 ಸೆಂಮೀ, ಕಿನ್ನಿಗೋಳಿಯಲ್ಲಿ 9.25, ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟುವಿನಲ್ಲಿ

ಪುತ್ತೂರು : ಆಶ್ರಯ ಮನೆಗಾಗಿ ಇದ್ದ ಮನೆಯನ್ನೂ ಕೆಡವಿ ಬೀದಿಗೆ ಬಿದ್ದ ಕುಟುಂಬ

ಪುತ್ತೂರು: ಆಶ್ರಯ ಮನೆಯ ಆಸೆಯಲ್ಲಿ, ಇದ್ದ ಮನೆಯನ್ನೂ ಕೆಡವಿ ಬೀದಿಗೆ ಬಿದ್ದ ಬಡ ಕುಟುಂಬವೊಂದು ಪುತ್ತೂರು ತಾಲೂಕಿನ ಮುಂಡೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕಡ್ಯಾ ಎಂಬಲ್ಲಿದೆ. ಮನೆ ಇಲ್ಲದ ಕಾರಣ ಕಳೆದ ಮೂರು ತಿಂಗಳಿನಿಂದ ಈ ಕುಟುಂಬ ಪ್ಲಾಸ್ಟಿಕ್ ಹೊದಿಕೆಯ ಗುಡಿಸಲಲ್ಲೇ ಬದುಕಬೇಕಾದ ಅನಿವಾರ್ಯ ಸ್ಥಿತಿಯಲ್ಲಿದೆ. ಕಡ್ಯ ಗ್ರಾಮದ ಮೋನಪ್ಪ ಎಂಬವರ ಕುಟುಂಬ ಆಶ್ರಯ ಮನೆಗಾಗಿ ಕಳೆದ ವರ್ಷ ಗ್ರಾಮ ಪಂಚಾಯತ್‍ಗೆ ಅರ್ಜಿ ಸಲ್ಲಿಸಿತ್ತು. ಇತ್ತೀಚೆಗಷ್ಟೇ ಮೋನಪ್ಪ

ಮೂಡುಬಿದಿರೆ : ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಪ್ರಕೃತಿ ವಿಕೋಪ ಸಮರ್ಥವಾಗಿ ನಿರ್ವಹಿಸಲು ಬೇಕಾದ ಎಲ್ಲಾ ರೀತಿ ಸಿದ್ಧತೆಯನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಹೇಳಿದರು. ವಿ4ನ್ಯೂಸ್‍ನೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು, ಇದರಲ್ಲಿ ಸ್ಪೀಕರ್ ಅವರು ಕೆಲವೊಂದು

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.

ದ.ಕ. ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು

ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ಬಗೆಗೆ ಕಾರ್ಯಾಗಾರ

ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಕೃತಿ ವಿರುದ್ಧವಾಗಿ ಬದುಕುದನ್ನು ನಾವು ನಿಲ್ಲಿಸಬೇಕು. ಪ್ರಕೃತಿಯನ್ನು ಆರಾಧಿಸುವ ಜೊತೆಗೆ