Home Posts tagged #dc rajendra k.v

ಕೋವಿಡ್-19 ನಿಯಂತ್ರಿಸಲು ಸಿಎಂ ನೀಡಿದ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಿ:  ಜಿಲ್ಲಾಧಿಕಾರಿ

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ ದೋಣಿಗಳನ್ನು ಯೋಜ‌ನಾ ಪ್ರದೇಶದಲ್ಲಿ ಲಂಗರು ಹಾಕಿ ಮೂರು ತಿಂಗಳಿನಿಂದ “ಪಲ್ಗುಣಿ ಸಾಂಪ್ರದಾಯಿಕ

ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ಮುಂದುವರಿಕೆ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ

ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಬರ್ಂಧಗಳನ್ನು ವಿಧಿಸಿದ ನಂತರವೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗುತ್ತಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ

ಎಂಡೋಸಲ್ಫಾನ್ ಸಂತ್ರಸ್ತರಿಗೆ ಪಿಂಚಣಿ ಸಲ್ಲಿಕೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಲು ಜಿಲ್ಲಾಧಿಕಾರಿ ಸೂಚನೆ

 ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನೀಡಲಾಗುತ್ತಿರುವ ಪಿಂಚಣಿ ಪ್ರತಿಯೊಬ್ಬರಿಗೂ ತಲುಪುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಅವರು ಎಚ್ಚರಿಕೆ ನೀಡಿದರು.ಅವರು  ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮ ಕುರಿತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ

ದ.ಕ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧಾಹ್ನ 1ರ ವರೆಗೆ ಅವಕಾಶ: ಜಿಲ್ಲಾಧಿಕಾರಿ

ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್‍ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ