ಪುತ್ತೂರು: ಸರ್ವೆ ಗೌರಿ ಹೊಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದ್ದ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತದೇಹ ಪತ್ತೆಯಾಗಿದೆ.ಸರ್ವೆಯ ಗೌರಿ ಹೊಳೆಯ ಸೇತುವೆಯ ಬಳಿ ಮೃತದೇಹ ಪತ್ತೆಯಾಗಿದೆ. ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಸರ್ವೆ ಗೌರಿ ಹೊಳೆಯ ಸಮೀಪ ಪತ್ತೆಯಾಗಿತ್ತು.
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದುದ್ದನ್ನು ಶಿರೂರ್ ಟೋಲ್ ಗೇಟ್ ಬಳಿ ಆಂಬ್ಯುಲೆನ್ಸ್ ಚಾಲಕ ತಡೆದು ನಿಲ್ಲಿಸಿದ ಘಟನೆ ನಡೆದಿದೆ.ಸ್ವಿಫ್ಟ್ ಡಿಜೈರ್ ಕಾರಿನ ಢಿಕ್ಕಿಯಲ್ಲಿ ಮೃತದೇಹವನ್ನು ಇರಿಸಿ ರವಾನೆ ಮಾಡುತ್ತಿದ್ದ. ಕಾರಿನಲ್ಲಿ ಮೃತದೇಹ ಕೊಂಡೊಯ್ಯುತ್ತಿದ್ದ ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.ಆಂಬ್ಯುಲೆನ್ಸ್‌ನಲ್ಲಿ ಜಾಸ್ತಿ ಹಣ ಕೇಳಿದ್ದಕ್ಕಾಗಿ ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದೆ ಎಂದು ವಾರೀಸುದಾರರು
ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ ಸುಮಾರಿಗೆ ಪಕ್ಕದ ಮನೆಯ ಅಂಗಳದಲ್ಲಿ ನಡೆದು ಹೋಗುವುದನ್ನು ಆ ಮನೆ ಮಂದಿ ನೋಡಿದ್ದರು. ಅಲ್ಲಿಂದ
ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ ಹೊರಗಡೆಯಲ್ಲಿ ಈತನಿಗೆ ಸೇರಿದ ಬೈಕ್ ಕಂಡು ಬಂದಿದೆ.ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ
ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ