Home Posts tagged #death news (Page 3)

ಉಡುಪಿ: ಎರಡು ಬೈಕುಗಳ ನಡುವೆ ಅಪಘಾತ – ಓರ್ವ ಬೈಕ್ ಸವಾರ ಸಾವು

ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡಿ ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ.

ಮೂಡುಬಿದಿರೆ: ಗುತ್ತಿಗೆದಾರ ಜಯ ಮೇಸ್ತ್ರಿ ನಿಧನ

ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ ನಡೆದಿದ್ದ ‘ತುಳುವೆರ್ ಬೆದ್ರ’ ಸಂಘಟನೆಯ ನಾಟಕ ಪ್ರದರ್ಶನ ವೇಳೆ ಜಯ ಮೇಸ್ತ್ರಿ ಅವರನ್ನು

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,

ಮೂಡುಬಿದಿರೆ :ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ್ ಜೈನ್ ನಿಧನ

ಮೂಡುಬಿದಿರೆ : ತಾಲೂಕಿನ ಪಡುಮಾರ್ನಾಡು ಪ್ರೀತಿ ನಿವಾಸದ ವಿಶ್ರಾಂತ ಮುಖ್ಯ ಶಿಕ್ಷಕ ಫಣಿರಾಜ ಜೈನ್(67ವ.) ಜ13ರಂದು ರಾತ್ರಿ ನಿಧನರಾದರು.ಪತ್ನಿ ಮೂವರು ಪುತ್ರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬೆಳುವಾಯಿ ಬಂಗ್ಲೆ ಶಾಲೆ ಕೆಸರ್ ಗದ್ದೆ ಮೈನ್ ಶಾಲೆ ಮುಖ್ಯ್ಯೊ ಪಾಧ್ಯಾಯರಾಗಿ ಗುರುಪುರ, ಸುಳ್ಯ, ಮಡಿಕೇರಿ ಪ್ರೌಢಶಾಲೆ ಶಿಕ್ಷಕ ರಾಗಿ, ಸಾಕ್ಷರತ ಅಂದೋಲನ, ಮುಂದುವರಿಕ ಶಿಕ್ಷಣ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿದ್ದರು. ಮಾರ್ನಾಡು ಶ್ರೀ ವರ್ಧಮಾನ ಸ್ವಾಮಿ

ಮಂಜೇಶ್ವರ: ಕುಂಬಳೆಯಲ್ಲಿ ಕಾರು ಅಪಘಾತ : ಮಹಿಳೆ ಸಾವು

ಮಂಜೇಶ್ವರ: ಸೋಮವಾರ ಮಧ್ಯಾಹ್ನ ಮಟ್ಟಂ ಶಿರಿಯಾ ಬಳಿ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡ 62 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಕಾಇಾಂಗಾಡಿನ ಕೊವ್ವಲ್ಪಳ್ಳಿ ಮಾನ್ಯಾಟ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಿವಾಸಿ ನಫೀಸ (62) ಸಾವನ್ನಪ್ಪಿದ ದುರ್ದೈವಿ. ಅಪಘಾತದಲ್ಲಿ ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಇತರ ನಾಲ್ಕು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾಂ.ಪಂ.ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

ಮೂಡುಬಿದಿರೆ: ಸಮಾಜ ಸೇವಕ, ಹೊಸಂಗಡಿ ಗ್ರಾ.ಪಂ.ನ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯರಾಗಿರುವ ಹರಿಪ್ರಸಾದ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಹೊಸಂಗಡಿ ನಿವಾಸಿಯಾಗಿರುವ ಅವರು ಹರಿಯಣ್ಣ ಎಂದೇ ಚಿರಪರಿಚಿತರಾಗಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ. ಪೆರಾಡಿ ಸೊಸೈಟಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತನ್ನನ್ನು ಸಕ್ರಿಯವಾಗಿ

ಉಡುಪಿ : ಉದ್ಯಾವರದಲ್ಲಿ ಈಚರ್ ಲಾರಿ, ಬೈಕ್ ನಡುವೆ ಢಿಕ್ಕಿ – ಬೈಕ್ ಸವಾರ ಮೃತ್ಯು

ಉದ್ಯಾವರ ಗುಡ್ಡೆ ಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19 ) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ

ತಿರುಪತಿ: ಕಾಲ್ತುಳಿತ ಪ್ರಕರಣ: 6 ಮಂದಿ ಮೃತ್ಯು: 30 ಮಂದಿಗೆ ಗಾಯ

ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ರಾತ್ರಿ 8 ಗಂಟೆಯ ಸುಮಾರಿಗೆ ತಿರುಮಲ ತಿರುಪತಿ ದೇವಸ್ಥಾನ ಅಧಿಕಾರಿಗಳು

ಮಂಗಳೂರು: ಹೊಸಬೆಟ್ಟುವಿನಲ್ಲಿ ಸಮುದ್ರಕ್ಕಿಳಿದ ನಾಲ್ವರಲ್ಲಿ ಓರ್ವನ ರಕ್ಷಣೆ: ಮೂವರ ಮೃತದೇಹ ಪತ್ತೆ

ಮಂಗಳೂರಿಗೆ ಪ್ರವಾಸಕ್ಕೆಂದು ಬಂದ ನಾಲ್ವರು ಸ್ನೇಹಿತರು ಹೊಸಬೆಟ್ಟು ಬೀಚ್‌ನ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರದಲ್ಲಿ ಈಜಲೆಂದು ಇಳಿದಿದ್ದು ಈ ಸಂದರ್ಭದಲ್ಲಿ ನಾಲ್ವರಲ್ಲಿ ಮೂವರು ಸಮುದ್ರ ಪಾಲಾಗಿದ್ದು, ಓರ್ವ ಯುವಕನನ್ನು ರಕ್ಷಣೆ ಮಾಡಲಾಗಿದೆ. ಕಾಲೇಜು ಮುಗಿಸಿ ಮಂಗಳೂರಿಗೆ ಪ್ರವಾಸಕ್ಕೆಂದು ನಾಲ್ವರು ಸ್ನೇಹಿತರು ಜೊತೆಗೆ ಬಂದಿದ್ದರು. ಇದೇ ವೇಳೆ ಹೊಸಬೆಟ್ಟು ಬಳಿ ನಿರ್ಮಾಣ ಹಂತದ ಜೆಟ್ಟಿ ಬಳಿ ಸಮುದ್ರಕ್ಕಿಳಿದ ನಾಲ್ವರು ನೀರಿನ ಸೆಳೆತಕ್ಕೆ ಸಮುದ್ರಪಾಲಾದರು.

ಉಡುಪಿ: ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ.ಪಳ್ಳಿಗುಡ್ಡೆ ನಿವಾಸಿ ದೀಪಕ್ ಆ‌ರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ ಕೊಠಡಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ದೀಪಕ್