ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಮುಳಿಯ ತಾಳಿಪಡ್ಪು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವಿವಾಹಿತರಾಗಿದ್ದ ಲಿಯೋ ಅವರು ಅಣ್ಣನ ಜೊತೆ ವಾಸವಿದ್ದರು ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣು ಬಿಗಿದು
ವಿಟ್ಲ: ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೇರಾ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿನಿ ಮಡಲ ನಿವಾಸಿ ಕಿಶೋರ್ ರವರ ಪುತ್ರಿ ತೀರ್ಥಶ್ರೀ (8) ಮೃತಪಟ್ಟ ಬಾಲಕಿ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿಟ್ಲ ಪೊಲೀಸರು ಬಾಲಕಿಯ
ಮೂಡುಬಿದಿರೆ : ಪಡುಮಾರ್ನಾಡು ಗ್ರಾಮದ ಬನ್ನಡ್ಕ ಎಂಬಲ್ಲಿ ಗುರುವಾರ ಸಂಜೆ ಬೈಕ್‌ನಿಂದ ಬಿದ್ದು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ(49) ಮೃತಪಟ್ಟಿದ್ದು ಪೋಲಿಸರು ಸಂಶಯಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ.ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ 3ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ವಾಪಸ್ಸು
ಹೆಬ್ರಿ: ಕಬ್ಬಿನಾಲೆ ಹೊನ್ನ ಕೊಪ್ಪಲ ಎಂಬಲ್ಲಿ ಪ್ರಗತಿಪರ ಕೃಷಿಕ ಜ್ಞಾನೇಶ್ವರ ಹೆಬ್ಟಾರ್(62) ಅವರು ಮರದಿಂದ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ. ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸಕ್ಕೆ ಹೋದ ತನ್ನ ಪತಿ ಮನೆಗೆ ಊಟಕ್ಕೆ ಬಾರದಿರುವುದನ್ನು ಗಮನಿಸಿದ ಪತ್ನಿ ಹಾಗೂ ಮಗಳು ಹುಡುಕುತ್ತಾ ಹೋದಾಗ ಮರದಡಿ ಬಿದ್ದಿದ್ದರು.ಮುನಿಯಾಲು ಸರಕಾರಿ ಪದವಿ ಪೂರ್ವ ಕಾಲೇಜಿನ ಎಸ್ ಡಿಎಂಸಿ ಅಧ್ಯಕ್ಷರಾಗಿ, ಕಬ್ಬಿನಾಲೆ
ಶ್ರೀ ಮಹಾವೀರ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ. ನೇಮಿರಾಜ ಹೆಗ್ಡೆ (84) ಮಂಗಳವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಲತಃ ಪಡಂಗಡಿ ಯವರಾದ ನೇಮಿರಾಜ ಹೆಗ್ಡೆ ಅವರು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯು, ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಬಿಎಸ್ ಸಿ ಪದವಿ, ಮೈಸೂರಿನಲ್ಲಿ ಬಿ. ಪಿ.ಎಡ್. ಪದವಿ ಗಳಿಸಿದರು. ‘ಮೂಡುಬಿದಿರೆ ಶ್ರೀಮಹಾವೀರ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ವೃತ್ತಿ ಜೀವನ ಪ್ರಾರಂಭಿಸಿ ಪೂರ್ಣ ಸೇವೆ
ಕಾರ್ಕಳ : ಕಳೆದ ಒಂದು ತಿಂಗಳ ಹಿಂದೆ ಗಂಡ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದಂತ ಅಂಗನವಾಡಿ ಟೀಚರ್ ಮನೆ ಸಮೀಪದ ಬಾವಿಗೆಹಾರಿ ಆತ್ಮಹತ್ಯೆಗೈದ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಎಂಬವರು ಘಟನೆಯಲ್ಲಿ ಬದುಕಿಗೆ ಅಂತ್ಯ ಹೇಳಿದವರು. ಮಿಯ್ಯಾರು ಚಚ್ ೯ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರ ಪತಿ ಕಳೆದೊಂದು
ಕಾರ್ಕಳ : ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಅಘಾತಕ್ಕೊಳಗಾಗಿ ದಾರುಣ ರೀತಿಯಲ್ಲಿ ಮೃತ ಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ. ಗುರುವಾರ ರಾತ್ರಿ ಈ ಘಟನೆಯಲ್ಲಿ ಲಲಿತಾ ಬೋಂಡ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು.
ಮಂಜೇಶ್ವರ : ಗೃಹಿಣಿಯೊಬ್ಬಳು ಮಕ್ಕಳನ್ನು ಶಾಲೆಗೆ ಕಳಿಸಲು ತಿಂಡಿ ತಯಾರಿಸುವ ತರಾತುರಿಯಲ್ಲಿ ಶಾಲ್ ಗ್ರೈಂಡರ್ ಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಉಪ್ಪಳ ಗೇಟ್ ಅಪ್ನಾ ಗಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಉಪ್ಪಳ ಗೇಟ್ ಅಪ್ನಾ ಗಲ್ಲಿ ನಿವಾಸಿ ಮುಂಬೈಯಲ್ಲಿ ಉದ್ಯಮಿಯಾಗಿರುವ ಇಬ್ರಾಹಿಂ ಎಂಬವರ ಪತ್ನಿ ಮೈಮೂನ (40) ಸಾವನ್ನಪ್ಪಿದ ದುರ್ದೈವಿ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಡಬ: ಕೋಡಿಂಬಾಳ ಸಮೀಪದ ಪುಳಿಕುಕ್ಕು ಮುರಚೆಡವು ಬಳಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ದೂಪದ ಮರ ಬಿದ್ದು ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದು ಎರಡು ದಿನ ಕಳೆದರೂ ಅವರು ಸ್ಕೂಟಿಯಲ್ಲಿ ಕೊಂಡೊಯ್ಯುತ್ತಿದ್ದ ಕೋಳಿ ಮಾತ್ರ ಘಟನೆ ನಡೆದ ಸ್ಥಳವನ್ನು ಬಿದ್ದು ಕದಲಿಲ್ಲ. ಸೀತಾರಾಮ ಅವರು ದೀಪಾವಳಿ ಪ್ರಯುಕ್ತ ಎಡಮಂಗಲದ ತನ್ನ ಮನೆಯಲ್ಲಿ ನಡೆಯಲಿದ್ದ ದೈವದ ಹರಕೆಗಾಗಿ ಕೋಡಿಂಬಾಳದಿಂದ ಕೋಳಿ ತೆಗೆದುಕೊಂಡು ಸ್ಕೂಟಿಯಲ್ಲಿ
ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಕೊಪ್ಪಲಂಗಡಿ ಬಳಿ ನಡೆದಿದೆ. ಮಂಗಳೂರುನಿಂದ ಉಡುಪಿ ಕಡೆ ಹೋಗತ್ತಿದ್ದ ಟ್ಯಾಂಕರ್ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡು ಮೃತ ಪಟ್ಟಿದ್ದು ಹರೀಶ್ ಕುಮಾರ್(45) ಮೃತ ದುರ್ದೈವಿ. ಟ್ಯಾಂಕರ್ ಚಾಲಕನ ನಿರ್ಲಕ್ಷದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























