ಮುಂಬೈ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆಕ್ಕಡಿ, ಸಂಯುಕ್ತ ಕರ್ನಾಟಕ ಪುತ್ತೂರು ತಾಲೂಕು ವರದಿಗಾರ ಮೇಘ ಪಾಲೆತ್ತಡಿ ಸಹೋದರ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ ಹೃದಯಾಘಾತದಿಂದ ನಿಧನ. ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಾಡಿ ನಿವಾಸಿ ರಾಮಣ್ಣ ಗೌಡ (69) ಅ.26 ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ರ ಹರೆಯದ ವಿದ್ಯಾಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ. ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (4) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ
ಬಂಟ್ವಾಳ: ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಹೃದಯಸ್ತಂಭನವಾಗಿ ಜೊತೆ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬಂಟ್ವಾಳದಲ್ಲಿ 1957,
ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ಎಂಬಲ್ಲಿ ಬೆಳಕಿಗೆ ಬಂದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತಪಟ್ಟವರು. ಅ.4ರಂದು ಮನೆಯಲ್ಲಿ ಮೊಬೈಲ್ ಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಮನೆ ಸುತ್ತಮುತ್ತಲೂ , ಸಂಬಂಧಿಕರ
ಕೇರಳ ಸಮಾಜಂನ ಮಾಜಿ ಅಧ್ಯಕ್ಷ, ಹಿರಿಯ ಸಂಘಟಕ, ತರಂಗಿಣಿ ಖ್ಯಾತಿಯ ಕೆ.ಎಂ ಸಚ್ಚೀಂದ್ರನಾಥ್(89) ಅವರು ನಿಧನ ಹೊಂದಿದ್ದಾರೆ.ಮೂಲತಃ ಕೇರಳದವರಾಗಿರುವ ಅವರು ಕುದ್ರೋಳಿಯಲ್ಲಿ ವಾಸವಾಗಿದ್ದರು. ಭಾರತ್ ಫ್ಲೈವುಡ್‌ನಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ಅವರು ನಂತರ ಕುದ್ರೋಳಿಯಲ್ಲಿ ಮಂಗಳೂರು ಫ್ಲೈವುಡ್ ಉದ್ಯಮ ನಡೆಸುತ್ತಿದ್ದರು.ತರಂಗಿಣಿ ಎಂಬ ಸಂಸ್ಥೆಯ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳನ್ನು ಮಂಗಳೂರಿನಲ್ಲಿ ನಿರಂತರವಾಗಿ ಆಯೋಜಿಸುತ್ತಿದ್ದರು.
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಂಡಡ್ಕ ನಿವಾಸಿ ಉಮೇಶ್ ಗೌಡ (38)ಮೃತ ವ್ಯಕ್ತಿ. ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರು ತಾಯಿ, ಅಣ್ಣ ತಮ್ಮಂದಿರನ್ನು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಬನ್ನಡ್ಕದಲ್ಲಿ ಸಂಭವಿಸಿದೆ.ಪಡುಮಾರ್ನಾಡು ಗ್ರಾ.ಪಂ.ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಆದಿತ್ಯ ಮೃತಪಟ್ಟ ದುರ್ದೈವಿ.ವಿದ್ಯಾರ್ಥಿ ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ
ಬೈಂದೂರು : ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು. ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮ್ರತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪತ್ನಿ ಕೆಲವು
ಪುತ್ತೂರು: ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ




























