ನೇಣು ಬಿಗಿದು ಆತ್ಮಹತ್ಯೆ ಸುಳ್ಯ. ಬೆಳ್ಳಾರೆ ನೆಟ್ಟಾರು ನವಗ್ರಾಮ ನಿವಾಸಿ ಚರಣ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಅನಾರೋಗ್ಯ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು ಆತ್ಮಹತ್ಯೆ ಮಾಡಲು ಕಾರಣ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ಧಾರವಾಡ ಕಡೆ ಪ್ರಯಾಣ ಬೆಳೆಸಿದ್ದಾರೆ.
ಪಡುಬಿದ್ರಿ: ಕಳೆದ ಎರಡು ದಿನದ ಹಿಂದೆ ನಾಪತ್ತೆಯಾದ ಪಲಿಮಾರು ಗುಂಡಿ ನಿವಾಸಿ ವ್ಯಕ್ತಿಯ ಶವ ಪಕ್ಕದ ಕೆಸರು ತುಂಬಿದ ಹಳ್ಳವೊಂದರಲ್ಲಿ ಪತ್ತೆಯಾಗಿದೆ.ಮೃತರು ಪಲಿಮಾರು ಗುಂಡಿ ನಿವಾಸಿ, ಮುಂಬೈ ಮಹಾ ನಗರದಲ್ಲಿ ವಾಸವಿದ್ದ ಆನಂದ ಪೂಜಾರಿ(51), ಊರಿನ ಮನೆಯಲ್ಲಿ ಕುಟುಂಬದ ದೈವದ ಧಾರ್ಮಿಕ ಕಾರ್ಯಕ್ರಮವಿದ್ದು ಅದರಲ್ಲಿ ಪಾಲ್ಗೊಂಡಿದ್ದ ಇವರು ರಾತ್ರಿ ಸುಮಾರು ಹನ್ನೆರಡರ ಸುಮಾರಿಗೆ ಪಕ್ಕದ ಮನೆಯ ಅಂಗಳದಲ್ಲಿ ನಡೆದು ಹೋಗುವುದನ್ನು ಆ ಮನೆ ಮಂದಿ ನೋಡಿದ್ದರು. ಅಲ್ಲಿಂದ
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ, ಶಿಕ್ಷಣ ಪ್ರೇಮಿ, ದೂರದೃಷ್ಟಿಯ ರಾಜಕಾರಣಿಯಾಗಿದ್ದ ಅವರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಐದು
ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ
ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ ಹೊರಗಡೆಯಲ್ಲಿ ಈತನಿಗೆ ಸೇರಿದ ಬೈಕ್ ಕಂಡು ಬಂದಿದೆ.ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ
ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ. ಸುಮಾರು30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಬೆಳ್ಯಪ್ಪ ಗೌಡ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಪೆರ್ಲಂಪಾಡಿಯ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ಯಪ್ಪ ಗೌಡರು ಕಳೆದ 50 ವರ್ಷಗಳಿಂದ ಹೊಟೇಲ್ ಉದ್ಯಮದಲ್ಲಿ ತೊಡಗಿಕೊಂಡಿದ್ದು, ಹಸಿವಿನಿಂದ ಬಂದವರಿಗೆ ಅನ್ನದಾತರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಎಪ್ರಿಲ್ 7ರಂದು ನಿಧನರಾಗಿದ್ದರು.




























