Home Posts tagged #death (Page 3)

ಉಳ್ಳಾಲ: ನಾಟೆಕಲ್ ಬೈಕ್ ಅಪಘಾತ – ಬೈಕ್‌ನಲ್ಲಿದ್ದ ಇಬ್ಬರು ಮೃತ್ಯು

ಉಳ್ಳಾಲ: ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮಧ್ಯಾಹ್ನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ

ಮೂಡುಬಿದಿರೆ : ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರಭಾವತಿ ಆಚಾರ್ಯ ನಿಧನ

ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ ಮನೆ ಮನೆಗೆ ಮಾಹಿತಿ ನೀಡುವ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಆನೆಗುಡ್ಡೆ ಚರ್ಚ್ ನಲ್ಲಿ ನಡೆದ

ಮಂಗಳೂರು: ಕೊಟ್ಟಾರದಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಮಂಗಳೂರಿನ ಕೊಟ್ಟಾರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟರ್‌ಗೆ ಲಾರಿಯೊಂದು ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.  

ಉಳ್ಳಾಲ: ಇಬ್ಬರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ

ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ  ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ  ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ

ಶಿರೂರು: ದೋಣಿ ದುರಂತ, ಇಬ್ಬರು ಮೀನುಗಾರರು ದುರ್ಮರಣ

ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ

ಬೀಡಿನಗುಡ್ಡೆಯಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ : ದಾರಿಯಲ್ಲಿ ನಡೆದುಕೊಂಡು‌ ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು‌ ತೋಡಿನಿಂದ ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು

ಕ್ಷುಲ್ಲಕ ವಿಚಾರಕ್ಕೆ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ. ಈ ಕೊಲೆ ದೃಶ್ಯವು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊಲೆಯಾದವರನ್ನು ಕಾರ್‌ಸ್ಟ್ರೀಟ್‌ನ ಮಹಮ್ಮಾಯಿ ದೇವಸ್ಥಾನ ರಸ್ತೆಯಲ್ಲಿರುವ ವೀರ ವೆಂಕಟೇಶ್ ಎಂಬ ಅಪಾರ್ಟ್ ಮೆಂಟ್ ನಿವಾಸಿ ವಿನಾಯಕ ಕಾಮತ್ ಎಂದು ಗುರುತಿಸಲಾಗಿದೆ. ಇವರು ಕರಂಗಲ್ಪಾಡಿಯಲ್ಲಿರುವ ಟ್ರಾವೆಲ್ಸ್ ವೊಂದರಲ್ಲಿ

ದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್

ಸೌಪರ್ಣಿಕಾ ನದಿಗೆ ಕಾಲು ಜಾರಿ ಬಿದ್ದು ತಾಯಿ, ಮಗು ಸಾವು

ಕುಂದಾಪುರ: ನದಿದಂಡೆಯಲ್ಲಿ ವಾಯು ವಿಹಾರ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮಗ ಕಾಲು ಜಾರಿ ನದಿಗೆ ಬಿದ್ದಿದ್ದು, ಆತನನ್ನು ರಕ್ಷಿಸಲೆಂದು ನದಿಗೆ ಹಾರಿದ ತಾಯಿ ಹಾಗೂ ಮಗ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ನಾಡ ಗ್ರಾಮದ ಚುಂಗಿಗುಡ್ಡೆಯಲ್ಲಿ ಸಂಭವಿಸಿದೆ. ನಾಡ ಗ್ರಾಮದ ಪತ್ರಕರ್ತ ನೋಯೆಲ್ ಚುಂಗಿಗುಡ್ಡೆ ಅವರ ಪತ್ನಿ ರೋಸಿರಿಯಾ (34) ಹಾಗೂ ಪುತ್ರ ಶಾನ್ ರಿಚ್ಚಿ (11) ಸಾವನ್ನಪ್ಪಿದವರು. ರೋಸಿರಿಯಾ ಅವರು ಹಿಂದೆ ಕುವೈಟ್‌ನಲ್ಲಿ ಜೆಟ್

ಸರಕಾರಿ ಆಸ್ಪತ್ರೆಯ ಪ್ರಖ್ಯಾತ ವೈದ್ಯರಾದ ಡಾ.ಸಂದೀಪ್ ಕುಮಾರ್ ಬೋರ್ಕರ್ ನಿಧನ

ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿದ್ದ ಡಾ.ಸಂದೀಪ್ ಕುಮಾರ್ ಬೋರ್ಕರ್(51) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೂಲತಃ ಉಡುಪಿ ಜಿಲ್ಲೆಯ ಶಿರ್ವ ಮಂಚಕಲ್ಲು ನಿವಾಸಿಯಾದ ಅವರು ಕಳೆದ ಸುಮಾರು 20 ವರ್ಷಗಳಿಂದ ಪುತ್ತೂರಿನಲ್ಲಿ ಹೆಸರಾಂತ ಪ್ರಸೂತಿ ತಜ್ಜರಾಗಿ ಸೇವೆ ಸಲ್ಲಿಸುತ್ತಿದ್ಸು, ಸರ್ಕಾರಿ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಇವರು ಹಿಂದೆ ಮಂಗಳೂರಿನ