Home Posts tagged #Dhakshinakannada

ಕಾಂಗ್ರೆಸ್‌ನಿಂದಾಗಿ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ : ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ 

ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ

ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಾದ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವ : ಕೇಂದ್ರ ಸಚಿವರೊಂದಿಗೆ ಸಮಾಲೋಚನಾ ಸಭೆ

ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ

ದ.ಕ. ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ: ಡಿಡಿಪಿಐ ಮಲ್ಲೇಸ್ವಾಮಿ

ಎಸೆಸೆಲ್ಸಿ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ 9 ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇಂದು ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಡಿಡಿಪಿಐ

ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ್ ಶೆಟ್ಟಿ ಭೇಟಿ, ಪರಿಶೀಲನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.

ಬಂಟ್ವಾಳದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಮೇರಮಜಲು ಗ್ರಾಮ ಪಂಚಾಯತಿ ಆಶ್ರಯದಲ್ಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸುವ ಕಾರ್ಯಕ್ರಮ ಶುಕ್ರವಾರ ಮೇರಮಜಲಿನ ಶ್ರಿ ರಾಜೇಶ್ವರೀ ಸಭಾಂಗಣದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಕಾರ್ಮಿಕರಿಗೆ ಕಿಟ್ ವಿತರಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರಕಾರ ಕೋವಿಡ್ ಸಂಕಷ್ಟ ಕಾಲದಲ್ಲಿ ಬಡ ಕಾರ್ಮಿಕರಿಗೆ ಆಹಾರದ ಕಿಟ್

ಪತ್ರಿಕಾ ದಿನಾಚರಣೆ : ಮ್ಯೋಗ್ಲಿಂಗ್ ಸ್ಮರಣೆ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ತಿಯೋಲಾಜಿಕಲ್ ಕಾಲೇಜಿನ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಕನ್ನಡ ಪತ್ರಿಕೋದ್ಯಮದ ಮೂಲಪುರುಷ “ಮಂಗಳೂರ ಸಮಾಚಾರ “ಪತ್ರಿಕೆಯ ಸಂಸ್ಥಾಪಕ ಸಂಪಾದಕ ಹೆರ್ಮನ್ ಫ್ರೆಡ್ರಿಕ್ ಮ್ಯೋಗ್ಲಿಂಗ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪತ್ರಿಕಾ ದಿನಾಚರಣೆ ಹಾಗೂ ಮ್ಯೋಗ್ಲಿಂಗ್ ಅವರಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ