ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ
ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿ ಕಳಚಿದಂತೆ ಆಗಿದೆ. ಮೇ 2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ