Home Posts tagged #Drama

ಸೌಹಾರ್ದತೆ ಬದುಕಿನ ಧ್ಯೇಯವಾಗಲಿ: ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ

ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ

ಮಂಗಳೂರು : ತುಳು ನಾಟಕ ಕಾರ್ಯಾಗಾರ ಉದ್ಘಾಟನೆ

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ

ಕಾರ್ಕಳ : ಎ.20ರಂದು ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ

ಚೈತನ್ಯ ಕಲಾವಿದರು ಬೈಲೂರು ತಂಡದ ವತಿಯಿಂದ ‘ಅಷ್ಟಮಿ ಶತ ಸಂಭ್ರಮ’ ಕಾರ್ಯಕ್ರಮ ಎ.20ರಂದು ಸಂಜೆ 5ರಿಂದ 10 ಗಂಟೆಗೆ ಬೈಲೂರು ಬಸ್ ಸ್ಟ್ಯಾಂಡ್ ಹತ್ತಿರ ಸೌಂದರ್ಯ ಕಾಂಪ್ಲೆಕ್ಸ್ ಬಳಿ ಜರಗಲಿದೆ ಎಂದು ತಂಡದ ಪ್ರವರ್ತಕ ಪ್ರಸನ್ನ ಶೆಟ್ಟಿ ಬೈಲೂರು ತಿಳಿಸಿದರು.ತನ್ನ ರಚನೆ, ನಿರ್ದೇಶನದಲ್ಲಿ ಇದು 10ನೇ ನಾಟಕವಾಗಿದ್ದು, ಅತೀ ಕಡಿಮೆ ಅವಧಿಯಲ್ಲಿ ಅಷ್ಟಮಿ ನಾಟಕ 100 ಪ್ರದರ್ಶನವನ್ನು ಪೂರೈಸಿದ್ದು, 115ನೇ ಪ್ರದರ್ಶನವರೆಗೂ ಬುಕ್ಕಿಂಗ್ ಪಡೆದುಕೊಂಡಿದೆ. ಜಿಲ್ಲೆ

ಮಂಗಳೂರು: ತುಳು ಮತ್ತು ಕನ್ನಡ ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ

ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್ ಮಂಜೇಶ್ವರ ತಂಡದ ಬಹು ಬೇಡಿಕೆಯ ಕಲಾವಿದರಾದ ಇವರು ತುಳು ಕನ್ನಡ ರಂಗಭೂಮಿಯ ಮೂಲಕ ತನ್ನ ಅಭಿನಯ

ಸುಳ್ಯ : ಪ್ರಪ್ರಥಮ ಬಾರಿಗೆ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋ – ಫೆ.16ರಂದು ನಡೆಯಲಿರುವ ಮೊದಲ ಆಡಿಷನ್

ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್‌ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆ.16ರಂದು ನಡೆಯಲಿದೆ ಈ ಬಗ್ಗೆ ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ

ಬಂಟ್ವಾಳ: ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವಕ್ಕೆ ಚಾಲನೆ

ಬಂಟ್ವಾಳ: ಬಿ.ವಿ.ಕಾರಂತ್, ಜಿ.ವಿ. ಅಯ್ಯರ್ ಅವರಂತಹ ಶ್ರೇಷ್ಠ ಸಾಧಕರೊಂದಿಗಿನ ಒಡನಾಟ ನನ್ನ ಬದುಕಿಗೆ ಧನ್ಯತೆ ನೀಡಿದೆ ಎಂದು ಅಂತರಾಷ್ಟೀಯ ಜಾದೂಗಾರ್ ಪ್ರೊ. ಶಂಕರ್ ಹೇಳಿದರು. ಅವರು ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್ ಮಂಚಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರುಇದರ ಸಹಯೋಗದಲ್ಲಿ ಕುಕ್ಕಾಜೆಯ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಚಿ ಬಿ.ವಿ.ಕಾರಂತ ನೆನೆಪಿನ ಮಂಚಿ ನಾಟಕೋತ್ಸವವನ್ನು ಉದ್ಘಾಟಿಸಿ ಬಳಿಕ

ಪ್ರಥಮ ಪ್ರದರ್ಶನದಲ್ಲೇ ಪ್ರೇಕ್ಷಕರ ಮನಗೆದ್ದ “ಮಾಯೊದ ಮಹಾಶಕ್ತಿಲು”

ಎಂ.ಕೆ. ಬಾಲರಾಜ್‌ ಸಾರಥ್ಯದ “ಎಂಕಲ್ನ ಕಲಾವಿದೆರ್” ಮಟ್ಟು ಕಟಪಾಡಿ ಅಭಿನಯಿಸಿದ “ಮಾಯೊದ ಮಹಾಶಕ್ತಿಲು” ಎಂಬ ತುಳು ಭಕ್ತಿ ಪ್ರಧಾನ ಅದ್ಧೂರಿ ನಾಟಕ ಪ್ರಥಮ ಪ್ರಯೋಗದಲ್ಲೇ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಕಳೆದ ಏಳನೇ ತಾರೀಕಿನಂದ್ದು ಉಡುಪಿಯ ಅಜ್ಜರಗಾಡು ಭುಜಂಗ ಪಾರ್ಕಿನ ಬಯಲು ರಂಗಮಂದಿರಲ್ಲಿ ನಡೆದ ನಾಟಕ ವೀಕ್ಷಿಸಲು ಕಲಾಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ನಾಟಕದ ಪ್ರತಿಯೊಂದು ಮಜಲುಗಳನ್ನು ಆಡಿಕೊಂಡಾಡಿ ನಾಟಕ

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ