Home Posts tagged #drugs

ಉಳ್ಳಾಲ: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ

ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ‌. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ

ಕೊಣಾಜೆ: ಗಾಂಜಾ ಬೇಟೆ – ನಾಲ್ವರ ಬಂಧನ

ಕೊಣಾಜೆ: ಅಕ್ರಮವಾಗಿ ಗಾಂಜಾ ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ಕು ಮಂದಿಯನ್ನು ಮಂಗಳೂರು ಗ್ರಾಮಾಂತರ, ಕಂಕನಾಡಿ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಿಂದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ನೇತೃತ್ವದ ಮಾದಕವಿರೋಧಿ ಪೊಲೀಸ್ ತಂಡ ಕರ‍್ಯಾಚರಣೆ ನಡೆಸಿ ಎನ್ ಡಿಪಿಎಸ್ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದೆ.ದೇರಳಕಟ್ಟೆಯ ಬೆಳ್ಮ ಕನಕೂರಿನ ಅಶ್ರಫ್ ಯಾನೆ ಪೊಂಗ (30), ತಿಲಕನಗರದ ಮೊಹಮ್ಮದ್ ಅಲ್ಫಾಝ್ ( 26) ಇಬ್ಬರನ್ನು 115 ಗ್ರಾಂ

ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ

ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ.ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22) ಬಂಧಿತ.ಬಂಧಿತನಿಂದ ರೂ. 9,660 ಬೆಲೆಯ 322 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಠಾಣಾ ಉಪನಿರೀಕ್ಷಕ ನಾಗರಾಜ್ ಹಾಗೂ

ಉಳ್ಳಾಲ: ಗಾಂಜಾ ಮತ್ತಿನಲ್ಲಿ ದಾಂಧಲೆ: ಸಾರ್ವಜನಿಕರಿಂದ ತರಾಟೆ, ಪೊಲೀಸರಿಂದ ಬಂಧನ

ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ

ಡ್ರಗ್ಸ್ ಎಂಬ ಮದ್ದು ಮಾದಕ ಆಗುವುದು ಹೇಗೆ?

ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದಾಗಿ ಒಳಾಡಳಿತ ಮಂತ್ರಿಗಳಾದ ಜಿ. ಪರಮೇಶ್ವರ್ ಅವರು ಪೋಲೀಸು ಅಧಿಕಾರಿಗಳ ಸಭೆಯಲ್ಲಿ ಹೇಳಿದರು. ಬೆಂಗಳೂರು ಮತ್ತು ಮಂಗಳೂರುಗಳ ಮಾದಕ ದ್ರವ್ಯಗಳ ಲೋಕ, ಆಫ್ರಿಕಾದ ವಿದ್ಯಾರ್ಥಿಗಳ ಡ್ರಗ್ಸ್ ಕೈಚಳಕವನ್ನೂ ಅವರು ಪ್ರಸ್ತಾಪ ಮಾಡಿದರು. ಈ ಶಬ್ದ ನೋಡಿ ಡ್ರಗ್ಸ್. ಡ್ರಗ್ಸ್ ಎಂದರೆ ಮದ್ದುಗಳು. ಮದ್ದುಗಳಿಂದ ಲೋಕವನ್ನು ಮುಕ್ತ ಮಾಡುವುದು ಸಾಧ್ಯವಿಲ್ಲ. ಮದ್ದುಗಳ ದುರ್ಬಳಕೆಯೇ ಮಾದಕ ದ್ರವ್ಯ ಇಲ್ಲವೇ ಮಾದಕ ವಸ್ತುಗಳು. ಆದ್ದರಿಂದ ಅದು ಕೂಡ

ಬಜ್ಪೆ: ಮಾದಕ ವಸ್ತು ಮಾರಾಟ, ಮೂವರ ಬಂಧನ

ಬೈಕ್‌ನಲ್ಲಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್‌ನ ಹೊಸಬೆಟ್ಟು ಈಶ್ವರನಗರ ನಿವಾಸಿ ಅಣ್ಣಪ್ಪಸ್ವಾಮಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ  ಬಡಜೇ  ನಿವಾಸಿ ಮೊಹಮ್ಮದ್ ಜುನೈದ್  ಹಾಗೂ ಹೊಸಬೆಟ್ಟು ವಿನ ಪಡ್ಡಾಯಿ ನಿವಾಸಿ ಎಂ.ಕೆ ಆಕಾಶ ಬಂಧಿತರು. ಬಜಪೆ ಪೊಲೀಸ್ ಠಾಣೆಯ ಪಿಎಸ್ ಐ ಗುರಪ್ಪ ಕಾಂತಿ ರವರು ಸಿಬ್ಬಂದಿಯವರ ಜೊತೆ ಬಜಪೆಯ ಶಾಂತಿಗುಡ್ಡೆ ಚೆಕ್ ಪಾಯಿಂಟ್ ಬಳಿ ಬಜಪೆಯಿಂದ ಕಳವಾರು

ಮಂಗಳೂರು: ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳ ಬಂಧನ

ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್‍ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೆÇೀನು, ನಗದು 1,800 ರೂ.,

ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳ ಮಾರಾಟ

ನಗರದ ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಠ್ ಮಾಲೀಕತ್ವದ ಅಂಗಡಿ ಮತ್ತು ಉತ್ತರ ಪ್ರದೇಶ ಮೂಲದ ಬೆಚನ್ ಸೋನಾರ್ ಅವರ ಮಾಲೀಕತ್ವದ ಫಳ್ನೀರ್‌ನಲ್ಲಿರುವ ಮತ್ತೊಂದು ಅಂಗಡಿಯಿಂದ ಚಾಕೊಲೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್ಸ್ ಲೇಪಿತ ಚಾಕೊಲೇಟ್‌ಗಳ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್‌ಗಳನ್ನು ‘ಬ್ಯಾಂಗ್’ ಚಾಕೊಲೇಟ್‌ಗಳ

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ – ಕಮೀಷನರ್

ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ಕುರಿತು ಜಾಗೃತಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕೆಲವು ವೈದ್ಯರು ಮತ್ತು ಎಫ್‍ಎಸ್ ಎಲ್ ಅಧಿಕಾರಿಗಳು ಸಹ