ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್,
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕೆಲವು ವೈದ್ಯರು ಮತ್ತು ಎಫ್‍ಎಸ್ ಎಲ್ ಅಧಿಕಾರಿಗಳು ಸಹ
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ
ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ ಎದ್ದು ಪರಾರಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ಕುಂಜತ್ತೂರು ಪದವು ರಸ್ತೆಯಂದ ಮದ್ಯವನ್ನು ಹೇರಿಕೊಂಡು ಆಗಮಿಸಿದ ರಿಕ್ಷಾ ಪಲ್ಟಿಯಾಗಿದೆ. ಬಳಿಕ ಊರವರು
ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ಮಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಡ್ರಗ್ಸ್‌ನೊಂದಿಗೆ ಬಂಧಿಸಿದ್ದಾರೆ. ಬಂಧಿತ ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34) ಹಾಗೂ ಹಿಮಾಚಲ ಪ್ರದೇಶದ ರಾಮ್ (22) ಎಂದು ಗುರುತಿಸಲಾಗಿದೆ. ಈ ಮಧ್ಯೆ ನಗರದ ಹೊಟೇಲೊಂದರಲ್ಲಿ ಹಿಮಾಚಲ ಪ್ರದೇಶದ ರಾಮ್ ಜತೆ ಬಂಧಿಸಲಾಗಿದ್ದು, ಬಂಧಿತರಿಂದ ಎಂಡಿಎಂಎ ಹಾಗೂ ಗಾಂಜಾ