ಶರಣ್ ಪಂಪ್ ವೆಲ್ ತುಮಕೂರಿನಲ್ಲಿ ಸಂಫಪರಿವಾರದ ವೇದಿಕೆಯಲ್ಲಿ ಮಾಡಿದ ಭಾಷಣ ದುಷ್ಟತನದ ಪರಮಾವಧಿ. ಸುರತ್ಕಲ್ ಜಂಕ್ಷನ್ ನಲ್ಲಿ ನಡೆದ ಅಮಾಯಕ ಮುಸ್ಲಿಂ ಯುವಕ ಫಾಝಿಲ್ ಕೊಲೆಯನ್ನು “ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ ಕೊಲೆ” ಎಂದು ಬಹಿರಂಗವಾಗಿ ಹೇಳಿದ್ದಾರೆ. ಇನ್ನಷ್ಟು ಇಂತಹ ದಾಳಿಗಳು ನಡೆಯಲಿದೆ ಎಂದು ಬೆದರಿಕೆ ಹಾಕಿದ್ದಾರೆ.
ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ. ಈ
ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ದುಂಡಾವರ್ತನೆಯ ಭಾಗವಾಗಿಯೆ ಕಾಟಿಪಳ್ಳ ದಲ್ಲಿ ಜಲೀಲ್ ಎಂಬ ಅಮಾಯಕ ಅಂಗಡಿ ವ್ಯಾಪಾರಿಯ ಕೊಲೆಯಾಗಿದೆ. ಈ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ ಎಂದು ಡಿವೈಎಫ್ಐ ರಾಜ್ಯ ಸಮಿತಿ ಆರೋಪಿಸಿದೆ. ಕಳೆದ ಒಂದು ವರ್ಷದ
ಟೋಲ್ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್ಐಟಿಕೆ ಸಮೀಪ ಇರುವ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಟೋಲ್ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ
ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ
ವಿಠ್ಠಲ ಮಲೆಕುಡಿಯ ಮತ್ತು ಅವರ ತಂದೆಯವರ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ”ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ. ಹಾಗೂ ಸಂತ್ರಸ್ತರಾಗಿ
ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ
ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ