Home Posts tagged #edcation

ಶಾಲೆಯ ಅಂಗಳದಲ್ಲೇ ತರಗತಿ ಅಳಿಯೂರು ಶಾಲೆಯ ದುಸ್ಥಿತಿ

ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ

ಜೆಒಸಿ ಕೋರ್ಸ್ ಪಿಯುಸಿಗೆ ಸಮಾನ : ಜೆಒಸಿ ಅಭ್ಯರ್ಥಿಗೆ 9:1ರ ಅನುಪಾತದಲ್ಲಿ ಉದ್ಯೋಗಕ್ಕೆ ಅವಕಾಶ

ಅನುಕಂಪದ ಆಧಾರದ ಮೇಲೆ ನೀಡುವ ಹಾಗೂ ಈಗಾಗಲೇ ನೇಮಕಾತಿ ಹೊಂದಿ ಆದೇಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ವೃತ್ತಿ ಶಿಕ್ಷಣ ಕೋರ್ಸ್ (ಜೆಒಸಿ)ಗಳು “ಪಿಯುಸಿ” ವಿದ್ಯಾರ್ಹತೆಗೆ ಸಮಾನವೆಂದು ಪರಿಗಣಿಸಿ ಸರಕಾರ ಆದೇಶ ಹೊರಡಿಸಿದೆ. ಪಿಯುಸಿ ಅಥವಾ ಜೆಒಸಿ ಅಂಕಗಳನ್ನು ಪರಿಗಣಿಸದೆ ಕೇಲವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರಿಗಣಿಸಿ ಉದ್ಯೋಗಕ್ಕೆ ಆಯ್ಕೆ ಮಾಡುವುದಾದರೆ ಜೆಒಸಿಯನ್ನು ಪಿಯುಸಿಗೆ ತತ್ಸಮಾನವೆಂದು ಕನಿಷ್ಠ ಶೈಕ್ಷಣಿಕ ಅರ್ಹತೆಯಾಗಿ

ವಿದ್ಯಾರ್ಥಿಗಳ ಭವಿಷ್ಯದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ: ಶಾಸಕ ಯು.ಟಿ. ಖಾದರ್

ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರ್ಕಾರ ಚಿಂತನೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,