Home Posts tagged #election 2023

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಭೇಟಿ

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ

ಅಭಿವೃದ್ಧಿ ಕಾರ್ಯಕ್ಕೆ ಜನರು ಒಲವು ತೋರಿ ಗೆಲುವು ತಂದುಕೊಟ್ಟಿದ್ದಾರೆ : ರಾಜೇಶ್ ನಾಯ್ಕ್

ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಹೇಳಿದರು. ಅವರು ಬಿ.ಸಿ.ರೋಡಿನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ

ಐವನ್ ಡಿಸೋಜ ರವರು ವೇಲೆನ್ಸಿಯಾ ವಾರ್ಡಿನಲ್ಲಿ ಮತದಾನ

ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಶ್ರೀ ಐವನ್ ಡಿಸೋಜ ರವರು ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವೇಲೆನ್ಸಿಯಾ ವಾರ್ಡಿನ ತಮ್ಮ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಮತ ಚಲಾಯಿಸಿದ ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.

ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮಿಥುನ್ ರೈ ಮತದಾನ

ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತದಾನ 

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.

ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಿಂದ ಮತದಾನ

ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು. ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಪದವಿ ಪೂರ್ವ

ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ಪ್ರಜಾ ವಿಜಯ ಬಹಿರಂಗ ಸಭೆ

ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಅವರು ಮನವಿ ಮಾಡಿಕೊಂಡರು. ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದರು. ಸುನೀಲ್ ಕುಮಾರ್ ಪಕ್ಷ ವಿರೋಧಿಗಳ ಬಳಿ ಕಾಲು ಹಿಡಿಯುವ ಬದಲು ನೀವು