Home Posts tagged #election 2023 (Page 5)

ಕಾರ್ಕಳದಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಕಾರ್ಕಳ, ಈ ಸಲದ ಚುನಾವಣೆ ಕೌರವರ ಹಾಗೂ ಪಾಂಡವರ ಯುದ್ಧ, ಸತ್ಯದ ಮತ್ತು ಸುಳ್ಳಿನ ನಡುವಿನ ಯುದ್ಧ ವಾಗಿದೆ. ಈ ಸಲದ ಚುನಾವಣೆಯಲ್ಲಿ ಸತ್ಯಕ್ಕೆ ಜಯ ಸಲ್ಲುವುದು ಗ್ಯಾರಂಟಿಯಾಗಿರುತ್ತದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರುವುದು ಖಚಿತ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಳು ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳದಲ್ಲಿ

ಶಾಸಕ ರಾಜೇಶ್ ನಾಯ್ಕ್ ಅವರಿಂದ ನಾಮಪತ್ರ ಸಲ್ಲಿಕೆ : 35 ಕಿ.ಮಿ. ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ : ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಘೋಷಿಸಿಲ್ಲ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ರಿಲೀಸ್ ಮಾಡಿದೆ. 43 ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ.ಪ್ರಮುಖವಾಗಿ ಬಿಜೆಪಿ ಬಿಟ್ಟು ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಂ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಕುತೂಹಲ ಕೆರಳಿಸಿದ್ದ ಪುತ್ತೂರು ಕ್ಷೇತ್ರಕ್ಕೆ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಕಾರ್ಕಳ ಕ್ಷೇತ್ರಕ್ಕೆ ಉದಯ್ ಕುಮಾರ್

ಬಂದೂಕು ಠೇವಣಿಯಿಂದ ವಿನಾಯಿತಿ ನೀಡುವಂತೆ ಶಿರಾಡಿ ಗಡಿನಾಡ ರಕ್ಷಣಾ ಸೇನೆ ಅಗ್ರಹ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರೈತರು ತಮ್ಮ ಕೋವಿಗಳನ್ನು ಠೇವಣಿ ಇಡುವುದು ವಾಡಿಕೆಯಾಗಿದ್ದು, ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ದೃಷ್ಠಿಯಿಂದ ಕ್ರಿಮಿನಲ್ ಹಿನ್ನೆಲೆಯವರನ್ನು ಹೊರತು ಪಡಿಸಿ ಉಳಿದ ಬಂದೂಕುದಾರರಿಗೆ ಠೇವಣಿಯಿಂದ ರಿಯಾತಿ ನೀಡಬೇಕು ಎಂದು ಶಿರಾಡಿ ಗಡಿನಾಡ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಸಾಜು ಜೇಕಬ್ ಶಿರಾಡಿ ಅಗ್ರಹಿಸಿದರು. ಅವರು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಇತ್ತೀಚೆಗೆ ಆನೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ

ಮೂಡುಬಿದಿರೆ : ಶಿಷ್ಯನ ಪರವಾಗಿ ಮಾಜಿ ಸಚಿವ ಜೈನ್ ಮತಯಾಚನೆ

ಮೂಡುಬಿದಿರೆ – ತನ್ನ ಶಿಷ್ಯ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಗುರುವಾರ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬ್ರ 15ರ ಕೊಡಂಗಲ್ಲು ಪರಿಸರದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಚುನಾವಣೆ ಪ್ರಣಾಳಿಕೆಯ 300 ಗ್ಯಾರಂಟಿ ಕಾರ್ಡ್ ಹಸ್ತಾಂತರಿಸಿದ ಅಭಯಚಂದ್ರ ಅವರು ಮಿಥುನ್ ರೈಯನ್ನು ಮರೆಯದಿರಿ ಎಂದರು. ವಾರ್ಡ್ ಸದಸ್ಯೆ ರೂಪಾ ಸಂತೋಷ್ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್

ಕ್ಯಾಮರಾ ಮುಂದೆ ಬಾವುಕರಾಗಿ ಕಣ್ಣೀರಿಟ್ಟ ರಘುಪತಿ ಭಟ್

ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪುತ್ತಲೇ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ. ಅಭಿಮಾನಿಗಳನ್ನು ಕಂಡು ರಘುಪತಿ ಭಟ್ ಭಾವುಕರಾಗಿದ್ದಾರೆ. ನಾನು ಶಾಕ್ ನಲ್ಲಿದ್ದೇನೆ ಏನು ಹೇಳುವ ಸ್ಥಿತಿಯಲಿಲ್ಲ ಎಂದು ರಘುಪತಿ ಭಟ್ ಹೇಳಿದ್ದರು. ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಠ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಅನ್ನೋದು

ರಾಜಕೀಯದಿಂದ ನಿವೃತ್ತಿ ಘೋಷಿಸಿದ ಅಂಗಾರ

ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು ಎಂದು ಹೇಳಿದ ಅಂಗಾರರು, ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ

ನಾನು ಟಿಕೆಟ್ ಆಕಾಂಕ್ಷಿಯಲ್ಲ : ಕ್ಯಾ. ಗಣೇಶ್ ಕಾರ್ಣಿಕ್

ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೆಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಸ್ವಷ್ಟಪಡಿಸಿದರು

ಮೂಡುಬಿದಿರೆ : ಪೊಲೀಸರಿಂದ ಪಥ ಸಂಚಲನ

ಮೂಡುಬಿದಿರೆ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ಆಯುಕ್ತ ಮನೋಜ್ ಕುಮಾರ್ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ನಿರಂಜನ್ ಕುಮಾರ್ ನೇತೃತ್ವದಲ್ಲಿ ಆಲಂಗಾರು ಬಡಗು ಮಹಾಲೀಂಗೇಶ್ವರ ದೇವಸ್ಥಾನದ ಬಳಿಯಿಂದ ಮೂಡುಬಿದಿರೆ ಕನ್ನಡ ಭವನದವರೆಗೆ ಗುರುವಾರ ಸಂಜೆ ಪೊಲೀಸ ರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 80 ಜನ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಯ

ಕಾಂಗ್ರೆಸ್ : ಉಡುಪಿಯಲ್ಲಿ ಪ್ರಸಾದ್ ರಾಜ್ ಕಾಂಚಾನ್‌‌ಗೆ ಟಿಕೆಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಹಳೆ ಮೊಳಗಿಸಿರುವ ಕಾಂಗ್ರೆಸ್​, ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ .ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು 42 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.ಉಡುಪಿ ವಿಧಾನ ಸಭೆ ಕ್ಷೇತ್ರದಲ್ಲಿ ಪ್ರಸಾದ್ ರಾಜ್ ಕಾಂಚಾನ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ನಿರೀಕ್ಷೆಯಂತೆ ಮೊಗವೀರರಿಗೆ ಕಾಂಗ್ರೆಸ್ ಮಣೆ ಹಾಕಿದೆ.ಪ್ರಸಾದ್ ರಾಜ್ ಈಗಾಗಲೇ ಪಕ್ಷದ ಪ್ರಚಾರ