Home Posts tagged #elephant

ಕೊಕ್ಕಡ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಡಿಕೆ, ಬಾಳೆ ಕೃಷಿ ಧ್ವಂಸ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ವಡ್ರಳಿಕೆ ಎಂಬಲ್ಲಿ ಕಾಡಾನೆ ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ. ರಫಾಯಲ್ ಸ್ಟ್ರೆಲ್ಲಾ ಎಂಬವರ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಅಡಿಕೆ, ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಪದೇ ಪದೇ ಈ ರೀತಿಯ ದಾಳಿಯಿಂದ

ಹಾಸನ: ಕಾಡಾನೆ ಸೆರೆಗೆ ಆಪರೇಷನ್ ಆರಂಭ

ಹಾಸನ ಜಿಲ್ಲೆಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಆಪರೇಷನ್ ಆರಂಭವಾಗಿದೆ. 8 ಸಾಕು ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡಿಸೆಂಬರ್ 4ರಂದು ಕಾಡಾನೆ ಕಾರ್ಯಾಚರಣೆ ವೇಳೆ ಬಲಿಯಾಗಿದ್ದ ದಸರಾ ಆನೆ ಅರ್ಜುನ ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಲು ಜನರು ಒತ್ತಾಯಿಸಿದ್ದಾರೆ. ಇಂದಿನಿಂದ ಅಭಿಮನ್ಯ ನೇತೃತ್ವದಲ್ಲಿ ಕಾರ್ಯಾಚರಣೆಯ ನಡೆಯಲಿದೆ. ಬೇಲೂರು ತಾಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಸಾಕಾನೆಗಳನ್ನು ತರಲಾಗಿದೆ.

ಆನೆಯ ಸೀನಿಗೆ ಹೆದರಿ ಓಡಿದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತ್ಯು

ಮೂಡುಬಿದಿರೆ : ಆನೆ ಸೀನಿದ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್ ಬಳಿಯ ನಿವಾಸಿ ವಿಶ್ವನಾಥ ದೇವಾಡಿಗ (58ವ) ಮೃತಪಟ್ಟ ವ್ಯಕ್ತಿ. ಇವರು ದೇವಸ್ಥಾನದ ಆನೆಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಆನೆ ಸೀನಿದ್ದು ಈ ಸಂದರ್ಭ ಹೆದರಿ ಓಡಿ ಹೋಗುವಾಗ ಬಿದ್ದು ತಲೆಗೆ ಏಟು ಬಿದ್ದು ಗಂಭೀರ

ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ವಾಹನ ಅಟ್ಟಾಡಿಸಿದ ಕಾಡಾನೆ

ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.