ಕ್ರೈಸ್ತರ ಕಪ್ಪು ದಿನ ಆಚರಣೆಯ ಸಮಯದಲ್ಲಿ ಪವಿತ್ರ ವಾರದ ಗುರುವಾರದಂದು ಯೇಸು ಕ್ರಿಸ್ತ ತನ್ನ 12 ಶಿಷ್ಯರ ಪಾದ ತೊಳೆಯುವ ಮೂಲಕ ಸರಳತೆಯನ್ನು ಮೆರೆದರು ಎನ್ನುವ ವಿಚಾರದಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನಾ ಅವರು ಸುಳ್ಯ ತಾಲೂಕಿನ ಬೆಳ್ಳಾರೆಯ ಹೋಲಿಕ್ರಾಸ್ ಚರ್ಚ್‌ನಲ್ಲಿ ಪವಿತ್ರ ಗುರುವಾರ ಆಚರಣೆಗಳಿಗೆ ಚಾಲನೆ ನೀಡಿದರು.
ಪ್ರಭು ಯೇಸುಕ್ರಿಸ್ತರನ್ನು ಶಿಲುಬೆಗೇರಿಸುವ ದಿನವಾದ ಗುಡ್ ಫ್ರೈಡೇ(ಶುಭ ಶುಕ್ರವಾರ) ದಿನವನ್ನು ವಿಶ್ವದಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದು, ಪುತ್ತೂರು ತಾಲೂಕಿನ ಚರ್ಚ್‍ಗಳಲ್ಲಿಯೂ ಗುಡ್ ಫ್ರೈಡೇ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪುತ್ತೂರಿನ ಮಾಯಿದೆ ದೇವುಸ್ ಚರ್ಚ್, ಮರೀಲಿನ ಸೆಕ್ರೇಡ್ ಹಾರ್ಟ್ ಚರ್ಚ್, ಬನ್ನೂರಿನ ಸಂತ ಅಂತೋನಿ ಚರ್ಚ್, ಉಪ್ಪಿನಂಗಡಿ ದೀನರ ಕನ್ಯಾಮಾತಾ ದೇವಾಲಯ, ಬೆಳ್ಳಾರೆ ಚರ್ಚ್ ಸಹಿತಿ