ಮಂಗಳೂರು:ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ,ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ
ಅರುಣ್ ಕುಮಾರ್ ಅ.27ರಂದು ಸಂಜೆ 7ಗಂಟೆ ಸುಮಾರಿಗೆ ಫಲ್ಗುಣಿ ನದಿಗೆ ಹಾರಿದ್ದರು. ಇಂದು ಬೆಳಗ್ಗಿನಿಂದ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು ಈವರೆಗೆ ಅವರು ಪತ್ತೆಯಾಗಿಲ್ಲ. ಅರುಣ್ ಕುಮಾರ್ ವಿವಾಹಿತರಾಗಿದ್ದು, ಒಂದು ಮಗು ಕೂಡಾ ಇದೆ. ಅವರು ನದಿಗೆ ಹಾರಿರುವುದಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿ ಸಂಭವಿಸಿದೆ. ಇನ್ನು ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಅಪಾಯದಂಚಿನಲ್ಲಿದೆ. ಸ್ಥಳಕ್ಕೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು
ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ ಬಹಳಷ್ಟು ಜನರು ಪ್ರವಾದಿಯವರನ್ನು ಅರಿತಾಗ ಇಸ್ಲಾಂ ಸ್ವೀಕರಿಸಿದ ಚರಿತ್ರೆಯಿದೆ. ಪ್ರವಾದಿಯನ್ನು
ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಾಂತರ ಭಾಗದಲ್ಲಿರುವ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರ ಆಶಯ ಮತ್ತು ನೇತೃತ್ವದಲ್ಲಿ ಅದೇ ಪ್ರದೇಶದಲ್ಲಿ ಕೋವಿಡ್ ಲಸಿಕಾ ಸೌಲಭ್ಯ ನೀಡುವ ಅಂಗವಾಗಿ ಗುರುಪುರ- ಕೈಕಂಬದ ಮಾತೃಭೂಮಿ ಸಭಾಂಗಣದಲ್ಲಿ ಮಂಗಳವಾರ ಲಸಿಕಾ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಭಾಜಪಾ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಾಜೇಶ್ ಕೊಟ್ಟಾರಿ, ತಾಲೂಕು ಪಂಚಾಯತ್ ಮಾಜಿ
ಕೈಕಂಬ: ಗುರುಪುರ ಮಾಣಿಬೆಟ್ಟು ಶ್ರೀ ಕೊರ್ದಬ್ಬು ಪರಿವಾರ ದೈವಸ್ಥಾನಕ್ಕೆ ಹತ್ತಿರದಲ್ಲಿದ್ದ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖಲನ ಮಾಡಿದಾಗ ಸುಮಾರು 300 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ದೋಷವಿದೆ ಮತ್ತು ಹಳೆಯ ದೈವಸ್ಥಾನವಿದ್ದ ಜಾಗದಲ್ಲಿರಬಹುದಾದ ದೈವದ ಸೊತ್ತುಗಳ ಪತ್ತೆ ಹಚ್ಚಿ, ವಿಸರ್ಜಿಸಿದಾಗ ದೋಷ ನಿವಾರಣೆಯಾಗುತ್ತದೆ ಎಂದು ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ದ್ವೈವಜ್ಞರಾದ