ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ
ಉಪ್ಪುಂದ: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದು ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ. ಪದವೀಧರ ತನ್ನ ೬ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆಯವರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು ತೆರೆದ ವಾಹನದಲ್ಲಿ ಸಂಚರಿಸಿದ ಅವರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಮರ್ಪಿಸಿದರು ಅಲ್ಲದೆ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಅವರ ಗೆಲುವನ್ನು ಸ್ವಾಗತಿಸಿ ಪಟಾಕಿ ಸಿಡಿಸಿದರು. ಈ ವೇಳೆ ಮಾತನಾಡಿದ ಗುರುರಾಜ ಗಂಟೆ ಹೊಳೆಯವರು ಇದು ಯಾರೋ ಒಬ್ಬರ ಗೆಲುವಲ್ಲ ಸಂಪೂರ್ಣ ಕಾರ್ಯಕರ್ತರ ಗೆಲುವು ನಾವು ಕಾಣದೆ ಇರುವ
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ ಕರ್ತವ್ಯವನ್ನು ನೆರವೇರಿಸಿದರು.ಸಾಮಾನ್ಯರಲ್ಲಿ ಸಾಮಾನ್ಯರಂತೆ ಬಂದು ಮತ ಚಲಾಯಿಸಿ, ಅನಂತರ ಕೈ ಬೆರಳಿನ
ಬೈಂದೂರು: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಕೆ. ಅಣ್ಣಾಮಲೈ ಅವರು ಮೇ 8ರಂದು ಬೈಂದೂರು ಕ್ಷೇತ್ರದ ವಿವಿಧಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ರೋಡ್ ಶೋ ನಡೆಸಿ ಮತ ಯಾಚಿಸಲಿದ್ದಾರೆ. ಬೆಂಳಗ್ಗೆ 8.30ಕ್ಕೆ ತ್ರಾಸಿಯಿಂದ ರೋಡ್ ಶೋ ಆರಂಭಗೊಂಡು, ಮರವಂತೆ, ನಾವುಂದ, ಅರಹೊಳೆ ಬೈಪಾಸ್ ನಾಗೂರು, ಕಂಬದಕೋಣೆ, ನಾಯ್ಕನಕಟ್ಟೆ,
ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡ ಅಪಾರ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರನ್ನು ಕಂಡಾಗ, ಬಿಜೆಪಿ ಬಗ್ಗೆ ಬೈಂದೂರಿನ ಮಹಿಳೆಯರಿಗೆ ನಂಬಿಕೆಯಿರುವುದು ಖಾತ್ರಿ. ಅಪಾರ ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬೈಂದೂರಲ್ಲಿ ಗುರುರಾಜ್ ಗಂಟೆಹೊಳೆ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿಯ ಸ್ಟಾರ್ ಪ್ರಚಾರಕಿ, ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು. ಅವರು ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ನಡೆದ ಮಹಿಳಾ
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಗಂಗೊಳ್ಳಿ ಮತ್ತು ಹೊಸೂರು ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಗುರುರಾಜ್ ಗಂಟಿಹೊಳೆ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೈಂದೂರಿನ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಕಂಡ್ಲೂರಿನ ಸುತ್ತಮುತ್ತಲಿನಲ್ಲಿ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗುರುರಾಜ್ ಗಂಟಿಹೊಳೆಯವರು ಈ ಬಾರಿ ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳನ್ನಾಗಿ ಪಕ್ಷದವರು ಟಿಕೆಟ್ ನೀಡಿದ್ದಾರೆ. ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿಬೇಕೆಂದು ಹೇಳಿದರು.