ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ
ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ. ಪ್ರಜಾಪ್ರಭುತ್ವಕ್ಕೆ ಕರಾಳವಾಗಿ ಜಾರಿಯಾಗಿದ್ದ ತುರ್ತುಪರಿಸ್ಥಿತಿ ವಿರುದ್ಧ ವಸಂತ ಬಂಗೇರರ ಹೋರಾಟ,
ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.
ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಹೋಗಲು ಇದು ಬಹಳ ಹತ್ತಿರ ಇರುವುದರಿಂದ ಈ ರಸ್ತೆಯನ್ನು ಸರಿಪಡಿಸಲು ಸಂಬಂಧಪಟ್ಟ ಅರಣ್ಯ
ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ ದೂರು ನೀಡಿದ್ದಾರೆ. ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ
ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಇಂತಹ ಘಟನೆ ಮತ್ತೆ ಮರುಕಳಿಸಬಾರದು, ಇದೊಂದು ಹೀನ ಕೃತ್ಯ, ಪೊಲೀಸರ ಈ ಅಮಾನವೀಯ ಕೃತ್ಯವನ್ನು
ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.