ಮುಖ್ಯಮಂತ್ರಿ ,ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿವಿಧ ಇಲಾಖೆ ಸಚಿವರು ಭಾಗಿಆಲೂರು :ಸರ್ಕಾರದ ವಿವಿಧ ಸೇವೆಗಳ ಸಮರ್ಪಣಾ ಸಮಾವೇಶ ಡಿ.6 ರಂದು ಹಾಸನ ನಗರದಲ್ಲಿ ಜರುಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂಉಪಮುಖ್ಯಮಂತ್ರಿಯ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಇಲಾಖೆ ಸಚಿವರುಭಾಗವಹಿಸಲಿದ್ದಾರೆ
ಆಲೂರು: ಕಾರ್ಮಿಕರು ನಮ್ಮ ದೇಶದ ಬೆನ್ನೆಲುಬು, ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಗುರುವಾರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಬ್ರಿಡ್ಜ್ ಕೋರ್ಸ್ ತರಬೇತಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು.ದುಶ್ಚಟಕ್ಕೆ ಬಲಿಯಾದ ವ್ಯಕ್ತಿಯ ಆರೋಗ್ಯ ಹಾಳಾಗುವುದಲ್ಲದೆ, ಅವರ ಕುಟುಂಬ ಮತ್ತು
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ನ. 23ರಂದು ಸಂಭವಿಸಿದ ದಾರುಣ ಘಟನೆ ಗ್ರಾಮಸ್ಥರನ್ನು ಕಣ್ಣೀರಲ್ಲಿಟ್ಟುಬಿಟ್ಟಿದೆ. ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದ ದಂಪತಿ ದುರಂತವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಟ್ಟೆ ತೊಳೆಯುವ ಸಂದರ್ಭ ದೀಪು ಕಾಲು ಜಾರಿಬಿದ್ದು ನಾಲೆಗೆ ಬಿದ್ದಾಳೆ. ತಕ್ಷಣವೇ ಪತ್ನಿಯನ್ನು ರಕ್ಷಿಸಲು ಗೋಪಾಲ್ ನಾಲೆಗೆ ಇಳಿದರೂ, ನಾಲೆಯಲ್ಲಿ ಹರಿಯುತ್ತಿದ್ದ ಭಾರೀ ಪ್ರಮಾಣದ ನೀರಿನ ಹರಿವು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ರಿ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಸಹಯೋಗದೊಂದಿಗೆ ಆಲೂರು ವೀರಶೈವ ಸಮುದಾಯ ಭವನದಲ್ಲಿ ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಆಲೂರು ತಾಲೂಕು ಆಡಳಿತ ಸೌಧದ ತಹಶೀಲ್ದಾರ್ ಶ್ರೀ ಮಲ್ಲಿಕಾರ್ಜುನ್ ರವರು ದೀಪ ಬೆಳಗಿಸಿ ಧರ್ಮಸ್ಥಳ
ಹಾಸನದಲ್ಲಿ ನಿನ್ನೆ ಕಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ತಂಡವನ್ನು ಬೆನ್ನಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಅಡ್ಡ ಹಾಕಿದ ಪೋಲೀಸರು ಶಿಕ್ಷಕಿ ಅರ್ಪಿತಳನ್ನು ಗಂಡಾಂತರದಿಂದ ಪಾರು ಮಾಡಿದರು. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಅರ್ಪಿತ ಟೀಚರಾಗಿ ದುಡಿಯುತ್ತಿದ್ದಳು. ಸಂಬಂಧಿಕರಾದ ರಾಮು ಮನೆಯವರು ಹದಿನೈದು ದಿನಗಳ ಹಿಂದೆ ಮದುವೆ ಪ್ರಸ್ರಾಪ ಮುಂದಿಟ್ಟಿದ್ದರು. ಆದರೆ ಅರ್ಪಿತ ಒಪ್ಪಿರಲಿಲ್ಲ. ಆದ್ದರಿಂದ ರಾಮು ಮತ್ತು ತಂಡದವರು ಆಕೆಯನ್ನು ಶಾಲೆಯ
ಶ್ರವಣಬೆಳಗೊಳ ಹೋಬಳಿಯ ಹಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರು ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. 23 ವರ್ಷಗಳ ಹಿಂದೆ ಆರಂಭಗೊಂಡಿರುವ ಈ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಅಂದಿನಿಂದ ಇಂದಿನವರೆಗೂ ಇದೇ ಗ್ರಾಮದ ಜಯಂತಿ ಎಂಬುವವರು ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಹೊಸ ಆಡಳಿತ ಮಂಡಳಿ ರಚನೆಯಾಗಿದ್ದು, ಜಯಂತಿಯವರನ್ನು ಈವರೆಗಿನ ಖರ್ಚು ವೆಚ್ಚದ ವರದಿಯನ್ನು ಕೇಳಲಾಗಿದೆ. ಆದರೆ
ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ. ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ. ತಕ್ಷಣ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 12 ಜೊತೆ ಪಾದುಕೆಗಳು ಹಾಗೂ 28 ಕಮಂಡಲಗಳು ಪತ್ತೆಯಾಗಿವೆ. ಈ ಅಚ್ಚರಿಯ ಘಟನೆಯನ್ನು ವೀಕ್ಷಿಸಲು ಜನರು ಸಾಲು ಸಾಲಾಗಿ ಬರುತ್ತಿದ್ದರು.
ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್‍ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಹೇಳಿದರು. ಅವರು ಹಾಸನದಲ್ಲಿ ಮಾತನಾಡಿ, ಆಡಳಿತರೂಡ ಸರ್ಕಾರ ವಕೀಲರನ್ನು ಇಟ್ಟು ವಾದ ಮಾಡುವಲ್ಲಿ ವಿಫಲವಾಗಿದೆ. ನಮ್ಮ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದಾರೆ. ನಮಗೆ ನೀರಿಲ್ಲದಿರುವಾಗ ಪರರಿಗೆ ನೀರು ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.
“ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ” ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ರಾಜ್ಯದ ಸಮಸ್ಯೆಗಳನ್ನು ಕುರಿತು ಮಾನ್ಯ
ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ ಮಾಡಿದೆ.ಈ ಹಿಂದೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.




























