ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ
ಕಾರು – ಕಂಟೇನರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಡೆದಿದೆ. ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕಂದಲಿ ಸಮೀಪದ ಇಂದು ಬೆಳಗಿನ ಜಾವ 6:30 ರಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು, ಮೂರು ಪುರುಷರು, ಒಂದು ಮಗು ಸೇರಿ 6 ಮಂದಿ ಮೃತರಾಗಿದ್ದಾರೆ. ಒಂದೇ ಕುಟುಂಬದ ನಾರಾಯಣ ಸ್ವಾಮಿ, ಸುನಂದಾ, ರವಿಕುಮಾರ್, ನೇತ್ರ,ಚೇತನ್ (ಬಾಲಕ), ರಾಕೇಶ್ (ಡ್ರೈವರ್) ಮೃತರು. ಎಲ್ಲರೂ
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ
ಹಾಸನ ಜಿಲ್ಲೆಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಆಪರೇಷನ್ ಆರಂಭವಾಗಿದೆ. 8 ಸಾಕು ಆನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಡಿಸೆಂಬರ್ 4ರಂದು ಕಾಡಾನೆ ಕಾರ್ಯಾಚರಣೆ ವೇಳೆ ಬಲಿಯಾಗಿದ್ದ ದಸರಾ ಆನೆ ಅರ್ಜುನ ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಲು ಜನರು ಒತ್ತಾಯಿಸಿದ್ದಾರೆ. ಇಂದಿನಿಂದ ಅಭಿಮನ್ಯ ನೇತೃತ್ವದಲ್ಲಿ ಕಾರ್ಯಾಚರಣೆಯ ನಡೆಯಲಿದೆ. ಬೇಲೂರು ತಾಲೂಕಿನ ಬಿಕ್ಕೋಡು ಸಮೀಪದ ತಾತ್ಕಾಲಿಕ ಆನೆ ಶಿಬಿರಕ್ಕೆ ಸಾಕಾನೆಗಳನ್ನು ತರಲಾಗಿದೆ.
ಕುಪ್ಪಳ್ಳಿ: ಮಲೆನಾಡು ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ ಎರಡು ದಿನಗಳ ನಾಯಕತ್ವ ಶಿಬಿರ ಯಶಸ್ವಿಯಾಗಿ ಅಂತ್ಯಗೊಂಡಿತ್ತು.ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಅನಿಲ್ ಹೊಸಕೊಪ್ಪ ಇವರ ತಂಡ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಎರಡು ದಿನಗ ನಾಯಕತ್ವ ಶಿಬಿರವನ್ನು ಹಮ್ಮಿಕೊಂಡಿತ್ತು. ಶಿಬಿರಕ್ಕೆ ಚಿಕ್ಕಮಂಗಳೂರು, ಉಡುಪಿ, ಶಿವಮೊಗ್ಗ ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಜಿಲ್ಲೆ ಗಳಿಂದ ನೂರಾರು ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ
ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್ ಸುಜೀತಾ ಹಾಗೂ ಉಪವಿಭಾಗಧಿಕಾರಿ ಮಾರುತಿ ಅವರಿಂದ ಮಾಹಿತಿ ಪಡೆದ ಮೈಸೂರು ದಕ್ಷಿಣ ವಲಯ ಐ.ಜಿ ಅವರು, ದೇವಸ್ಥಾನದ ಸರತಿ ಸಾಲು, ವಾಹನಗಳ ಪಾರ್ಕಿಂಗ್, ಭಕ್ತರು ಬಂದು ಹೋಗುವ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಯನ್ನು
ಸಕಲೇಶಪುರ ನಗರದ ಬಿಎಂ ರಸ್ತೆಯಲ್ಲಿ ಬೈಕ್ ಹಾಗೂ ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ಲಾರಿಯ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾದ ಘಟನೆ ನಡೆದಿದೆ. ನಂತರ ಲಾರಿಯನ್ನು ಬಾಳುಪೇಟೆಯ ಹತ್ತಿರ ತಡೆದು ನಿಲ್ಲಿಸಿಲಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದಂತ ಮಂಜುಗೆ ಗಂಭೀರ ಗಾಯವಾಗಿದ್ದು ಇನ್ನೊರ್ವ ಯುವರಾಜ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ. ಇವರು ಜಮ್ಮನಹಳ್ಳಿ ಹಾಗೂ ಬಂದಿಹಳ್ಳಿಯವರು ಎಂದು ತಿಳಿದು ಬಂದಿದೆ. ಮಂಜುನಾಥ್ ಸ್ಥಿತಿ