ಹಾಸನ ಜಿಲ್ಲೆಯ ಸಕಲೇಶಪುರ ಹೆಬ್ಬನಹಳ್ಳಿ ಸಮೀಪ ಇರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಇಂದು ಭೇಟಿ ನೀಡಿದ ಉಪ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆ ಪ್ರಾರಂಭಕ್ಕೆ ಇರುವ ತೊಂದರೆಗಳ ಕುರಿತಾಗಿ ಚರ್ಚಿಸಿದ ಸಚಿವರು, ವಿದ್ಯುತ್ ಇಲಾಖೆ ಮತ್ತು ಭೂ ಸ್ವಾದೀನ
ಹಾಸನ ಜಿಲ್ಲೆ ಹೆಬ್ಬಾನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ವೀಕ್ಷಣೆಗೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಗಮಿಸಿದ್ದರು. ಇದೇ ವೇಳೆ ಪೆÇಲೀಸರಿಂದ ಗೌರವ ಸಮರ್ಪಣೆ ಸ್ವೀಕರಿಸಿದರು. ನಂತರ ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಡಾನೆ ಹಾವಳಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಏಳು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೈರಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡು ಏಳು ವರ್ಷಗಳಾದರೂ ಇನ್ನೂ
ಮಧ್ಯಾಹ್ನದ ಊಟ ಸವಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಈ ಪ್ರಕರಣ ಜರುಗಿದೆ ಅಸ್ವಸ್ಥಗೊಂಡಂತಹ ಸುಮಾರು 35 ಮಂದಿಯನ್ನು ಸದ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗರ ಒಳ್ಳೆಯ ಕ್ಯಾಂಪ್‍ನಲ್ಲಿರುವ ವಾಹನ ಚಾಲನಾ ತರಬೇತಿ ಸೈನಿಕರು ಮಧ್ಯಾಹ್ನ ಎಂದಿನಂತೆ ಊಟ ಸವಿದಿದ್ದಾರೆ ಕೆಲ ಸಮಯದಲ್ಲಿ ಸುಮಾರು 35
ಬೇಲೂರು : ಕಾಂಗ್ರೆಸ್ ಮುಖಂಡ ಮತ್ತು ಸಮಾಜಸೇವಕ ಹಾಗೂ ಪುಷ್ಪಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ರಾಜಶೇಖರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು ಬ್ರೆಡ್ ಹಣ್ಣು ವಿತರಿಸಲಾಯಿತು. ಸಮಾಜ ಸೇವಕ ಗ್ರಾನೈಟ್ ರಾಜಶೇಖರ್ 59 ನೇ ಜನ್ಮ ದಿನದ ಅಂಗವಾಗಿ ಜಿಲ್ಲಾ ಸೇವಾದಳ ಯುವ ಬ್ರಿಗೇಡ್ ಹಾಗೂ ಅಭಿಮಾನಿಗಳಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಬ್ರಡ್ ಹಾಲೂ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸೇವಾದಳ ಯುವ ಬ್ರಿಗ್ರೇಡ್
ಆಲೂರು ಸಕಲೇಶಪುರ ವಿಧಾನ ಸಭಾ ವ್ಯಾಪ್ತಿಗೆ ಬರುವ ಹಾಸನ ಜಿಲ್ಲೆ ಕಟ್ಟಾಯ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ಹೇಮಾವತಿ ಎಂಬುವವರ ಮನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಸಂಪೂರ್ಣ ಕರಕಲಾಗಿರುವ ಘಟನೆ ನಡೆದಿದೆ. ಮನೆಗೆ ಬೆಂಕಿ ತಗುಲಿ ಉರಿಯುತ್ತಿದ್ದಂತೆ ಗ್ರಾಮ ಜನರು ತಕ್ಷಣ ನೀರು ಹಾಕಿ ಬೆಂಕಿಯ ಕೆನ್ನಾಲಿಗೆ ತಿಳಿಗೊಳಿಸಲು ಹರಸಹಾಸಪಟ್ಟರು. ಘಟನೆಯಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ನಿತ್ಯ ಕೋಲಿ ನಂಬಿ ಜೀವನ ಸಾಗಿಸುತ್ತಿದ್ದ
ಮೂಲ ಮಾಲೀಕರ ಹೆಸರಿನಲ್ಲಿ ಭೂಮಿಯ ಪಹಣಿ ಇನ್ನಿತರ ದಾಖಲೆಗಳಿದ್ದರೂ, ಸರಕಾರದಿಂದ ನನಗೆ ಭೂಮಿ ಮಂಜೂರಾಗಿದೆ ಎಂದು ಹೇಳಿ ಮೂಲ ಭೂ ಮಾಲೀಕ ಬೆಳೆದಿದ್ದ ಜೋಳದ ಬೆಳೆಯನ್ನು ಟ್ರಾಕ್ಟರ್‍ನಿಂದ ಉಳುಮೆ ಮಾಡಿ ಹಾನಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಸನ್ಯಾಸಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಭೂ ಮಾಲೀಕ ಮಂಜುನಾಥ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದರಖಾಸ್ತಿನ ಮೂಲಕ ಜವರಮ್ಮ ಎಂಬುವರಿಗೆ ಮಂಜೂರಾಗಿದ್ದ ಸರ್ವೆ ನಂಬರ್
ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ನಾಶವಾಗಿರುವ ಘಟನೆ ಹಾಸನ ತಾಲೂಕು ಕಾರ್ಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೇಮಾವತಿ ಎಂಬುವರಿಗೆ ಸೇರಿದ ಮನೆ ಬೆಂಕಿಗೆ ಸಂಪೂರ್ಣವಾಗಿ ಸುಟ್ಟುಹೋಗಿದ್ದು , ಕುಟುಂಬಸ್ಥರು ದಿಕ್ಕಿಲ್ಲದೆ ನರಳುವಂತಾಗಿದೆ. ಮನೆಯಲ್ಲಿ ವಾಸವಾಗಿದ್ದ ಹೇಮವತಿ ಮತ್ತು ಅವರ ಇಬ್ಬರು ಮಕ್ಕಳು ಭರತ್ ಮತ್ತು ಶ್ರಾವಣಿ . ಮನೆಯಲ್ಲಿದ್ದ ದವಸ ಧಾನ್ಯ ಬಟ್ಟೆ ಸಂಪೂರ್ಣ ನಾಶವಾಗಿದೆ. ಘಟನೆ
ಸಕಲೇಶಪುರ : ಕೊಲ್ಲಹಳ್ಳಿಯ ಬಿಎಮ್ ರಸ್ತೆಯಲ್ಲಿ ಮುಂಜಾನೆ ಕಾಡಾನೆಯೊಂದು ರಾಜಾರೋಷವಾಗಿ ತಿರುಗಾಡುತ್ತಿರುವುದು ಕಂಡುಬಂತು. ಕಳೆದ ಎರಡು ದಿನಗಳ ಹಿಂದಷ್ಟೇ ಕಾಡಾನೆಗಳಿಗೆ ವಿಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ಸಮಯದಲ್ಲಿ ಹೊರಗೆ ಬರಲು ಜನತೆ ಭಯ ಪಡುತ್ತಿದ್ದಾರೆ. ಕಳೆದ ವಾರವಷ್ಟೇ ಇದೇ ಪ್ರದೇಶದಲ್ಲಿ ಎರಡು ಜನರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಕಾಫಿ ತೋಟಗಳಿಗೆ ಕೆಲಸಕ್ಕೆ ಹೋಗಲು ಕೆಲಸಗಾರರು ಭಯ ಪಡುವಂತಾಗಿದೆ.
ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.




























