ಸಕಲೇಶಪುರ: ಹೇಮಾವತಿ ಜಲಾಶಯ ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಮಂಜೂರು ಹಗರಣಕ್ಕೆ ಸಂಬಂಧಿಸಿದಂತೆ ಯಸಳೂರು ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಇಡೀ ರಾಜ್ಯದ ಗಮನ ಸೆಳೆದಿರುವ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಎಚ್‌ಆರ್‌ಪಿ ಭೂ ಹಗಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾದವರ ಸಂಖ್ಯೆ
ಹಾಸನ: ಅಭಿವೃದ್ಧಿ ವಿಚಾರದಲ್ಲಿ ಹಾಗೂ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಇದರ ಜೊತೆಗೆ ಅರಸೀಕೆರೆಯ ಮಾಜಿ ನಗರಸಭಾ ಅಧ್ಯಕ್ಷ ಸಮೀವುಲ್ಲಾ ತೊಘಲಕ್ ದರ್ಬಾರ್ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ನೀಡಿ ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡಿದ ಏಳು ಮಂದಿಗೆ ಈಗ ಜೆಡಿಎಸ್ ಪಕ್ಷ ವಿರೋಧಿ ಚಟುವಟಿಕೆಯ ಆಧಾರದ ಮೇಲೆ ನೋಟಿಸ್ ಜಾರಿ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು. ಅವರು ಹಾಸನದಲ್ಲಿ ಸುದ್ದಿಗೋಷ್ಠಿ
ಬೇಲೂರು ವಲಯ ಅರಣ್ಯಾಧಿಕಾರಿ ಯಶ್ಮ ಮಾಚಮ್ಮ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಕಾಡುಪ್ರಾಣಿ ಬೇಟೆಯಾಡಲು ಬಳಸಿದ್ದ 3 ಬಂಧೂಕು, 3 ದ್ವಿಚಕ್ರ ವಾಹನ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಂಡಿದ್ದಾರೆ. ಬೇಲೂರು ವಲಯ ಕಲ್ಲಳ್ಳಿ ಅರಣ್ಯ ಮೀಸಲು ಪ್ರದೇಶದಲ್ಲಿ ಕಾಡುಪ್ರಾಣಿ ಬೇಟೆಯಾಡಲು ಸಂಚುರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದರು. ಬೇಟೆಯಾಡಲು ಬಳಸಿದ್ದ ಬಂಧೂಕು ಹಾಗೂ ವಾಹನಗಳನ್ನು
ಒಂದೆಡೆ ಕೊರೊನಾ ಎಂಬ ಮಹಾಮಾರಿ ಮನುಷ್ಯನನು ಪಾತಳಕ್ಕೆ ತೊರೆಯುತ್ತಿದ್ದರೆ ಇನ್ನೊಂದು ಕಡೆ ಬೇಕರಿ ಕಾರ್ಮಿಕರ ಬದುಕು ಹೀನಾಯ ಸ್ಥಿತಿ ತಲುಪಿದೆ. ದಿನ ಬೆಳಗಾದರೆ ಬೇಕರಿ ಪದಾರ್ಥಗಳನ್ನು ಮಾರಿ ಬದುಕುವ ಬೇಕರಿ ಕಾರ್ಮಿಕರು ಇಂದು ಬೇಕರಿಗಳನ್ನು ಮುಚ್ಚಿರುವ ಕಾರಣ ಸಾಕಷ್ಟು ನಷ್ಟದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ಹಾಸನ ಅಯ್ಯಂಗಾರ್ ಬೇಕರಿ ಸುಟ್ಟು ಕರಕಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಬಂಟಕಲ್‍ನಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಹಾಸನ್ ಅಯ್ಯಂಗಾರ್ ಬೇಕರಿ
ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿ
ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 16.97 ಇರುವುದರಿಂದ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಒಂದು ವಾರ ಹೆಚ್ಚುವರಿಯಾಗಿ ಜಿಲ್ಲೆಯನ್ನು ಲಾಕ್ಡೌನ್ ಮಾಡಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ
ಹಾಸನದ ಚೇತನ ಫೌಂಡೇಶನ್ ಸದಸ್ಯರು ಹಾಸನ ಬಳಿ ವಾಸವಾಗಿರುವ ಸಿಳ್ಳೆಕ್ಯಾತ ಜನಾಂಗದವರಿಗೆ ಆಹಾರ ಕಿಟ್ ಅನ್ನು ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ ಈಗಾಗಲೇ ಚಲನಚಿತ್ರ ನಟ ಚೇತನ್ ಅವರು ಇಂಥ ಕೆಲಸಗಳನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತಾ ಬಂದಿದ್ದು ಕೊಡಗಿನಲ್ಲೂ ಭೂಕುಸಿತ ಆದ ಸಂದರ್ಭದಲ್ಲಿಯೂ ಕೂಡ ಅಲ್ಲಿನ ಜನರಿಗೆ ಸಹಾಯಕ್ಕೆ ನಿಂತಿದ್ದರು ಹಾಗೆಯೇ ಇಂದು ಚಲನಚಿತ್ರ ನಟರು ಸಾಕಷ್ಟು ಜನ ಸಂಕಷ್ಟದಲ್ಲಿದ್ದವರ ಬೆನ್ನೆಲುಬಾಗಿ ನಿಂತು ಅವರಿಗೆ ಸಹಾಯವನ್ನು
ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು. ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ ಪಡೆದ ಸಚಿವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದರು.
ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.