Home Posts tagged #heavy rain

ವಿಟ್ಲದಲ್ಲಿ ಭಾರೀ ಗಾಳಿ ಮಳೆಯ ಅವಾಂತರ : ಪಾರ್ಕಿಂಗ್‍ನಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಹಾನಿ

ಭಾರೀ ಮಳೆಗಾಳಿಗೆ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್‍ನ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಟ್ಟಡದಿಂದ ಕಲ್ಲುಗಳು ಬಿದ್ದು ಹಲವು ವಾಹನಗಳು ಹಾನಿಗೊಂಡ ಘಟನೆ ನಡೆದಿದೆ. ವಿಟ್ಲದಲ್ಲಿ ಇಂದು ಸಂಜೆ ವೇಳೆ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಅಂಗಡಿ ಮಳಿಗೆಗಳ ಮುಂಭಾಗದ ಪಾರ್ಕಿಂಗ್ ನಲ್ಲಿ ದ್ವಿಚಕ್ರ ವಾಹನಗಳನ್ನು

ಮಳೆಯಿಂದಾಗಿ ಭತ್ತದ ಕೃಷಿ ನಾಶ

ಮೂಡುಬಿದಿರೆ : ಅರಮನೆಯ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತವನ್ನು ಬೆಳೆದು ಇನ್ನೇನು ಕಟಾವು ಮಾಡಬೇಕೆನ್ನುವಷ್ಟರಲ್ಲಿ ಜೋರಾಗಿ ಬೀಸಿದ ಮಳೆಯಿಂದಾಗಿ ಗದ್ದೆಯಲ್ಲಿ ನೀರು ನಿಂತು ಭತ್ತವೆಲ್ಲಾ ಕೊಳೆತು ನಾಶವಾಗಿ ರೈತರು ಕಂಗಾಲಾದ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಾಂಟ್ರಾಡಿ ಗ್ರಾಮದ ಅರಮನೆ ಬೈಲು ಎಂಬಲ್ಲಿನ ಸ್ಥಳೀಯರಾದ 6 ಜನ ಸೇರಿಕೊಂಡು ಅರಮನೆಗೆ ಸಂಬಂಧಿಸಿದ 20 ಎಕ್ರೆ ಜಾಗವನ್ನು ಗೇಣಿಗೆ ಪಡೆದುಕೊಂಡು ಭತ್ತದ

ಬೆಳ್ತಂಗಡಿಯಲ್ಲಿ ಭಾರೀ ಮಳೆಯ ಅವಾಂತರ

ಬೆಳ್ತಂಗಡಿಯಲ್ಲಿ ಬಾರೀ ಮಳೆಯಿಂದಾಗಿ ರಸ್ತೆಯೆಲ್ಲ ಚರಂಡಿಯಂತಾಗಿದೆ,ತಾಲೂಕಿನ ಕೊಕ್ಕಡ ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿಯಿಲ್ಲದೆ ರಸ್ತೆಯಲ್ಲೇ ನೀರು ಹೋಗುವಂತಾಗಿದೆ. ರಸ್ತೆಯ ಎರಡೂ ಬದಿಯ ಜಾಗಗಳನ್ನು ಕೆಲವು ವ್ಯಕ್ತಿಗಳು ಚರಂಡಿ ಮುಚ್ಚಿ ಅದನ್ನು ಆಕ್ರಮಿಸಿ ಕಂಡಿರುವುದೇ ಇದಕ್ಕೆ ಕಾರಣವಾಗಿದೆ. ಕೊಕ್ಕಡ ಗ್ರಾಮ ಪಂಚಾಯತ್ ಎದುರಿನಲ್ಲೇ ಅಷ್ಟೊಂದು ನೀರು ರಸ್ತೆಯಲ್ಲೇ ಹೋದರೂ ಪಂಚಾಯತ್ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರು

ತೊಕ್ಕೊಟ್ಟು ಫ್ಪೈಓವರ್ ಸರ್ವೀಸ್ ರಸ್ತೆ ಜಲಾವೃತ : ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸಿದ ವ್ಯಕ್ತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಸುರಿದ ಧಾರಾಕಾರ ಮಳೆಯಿಂದಾಗಿ ತೊಕ್ಕೊಟು ಫ್ಪೈಓವರ್ ಕೆಳಗಡೆಯ ಸರ್ವೀಸ್ ರಸ್ತೆಯು ನೀರಿನಿಂದ ಜಲಾವೃತಗೊಂಡಿತ್ತು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ಇದೇ ವೇಳೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವ್ಯಕ್ತಿಯೋರ್ವ ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸುವ ದೃಶ್ಯ ಕಂಡುಬಂತು.  

ಕರಾವಳಿಯಲ್ಲಿಅಗಸ್ಟ್ 12ರವರೆಗೆ ಭಾರೀ ಮಳೆ ಸಾಧ್ಯತೆ

 ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.  

ಮಳೆಗೆ ಗುಡ್ಡ ಕುಸಿತ : ಮನೆ ಗೋಡೆ ಕುಸಿದು ಮಹಿಳೆಗೆ ಗಾಯ

ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಂಗಳೂರು ಹೊರವಲಯದಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ.ಘಟನೆಯಿಂದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು

ಕುಲಶೇಖರದ ಕೊಂಗೂರಿನಲ್ಲಿ ಗುಡ್ಡ ಕುಸಿತ: ರೈಲ್ವೇ ಹಳಿಯ ಮೇಲೆ ಬಿದ್ದ ಮಣ್ಣು: ರೈಲು ಸಂಚಾರ ಸ್ಥಗಿತ

ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ  ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದು, ನಿರ್ಮಾಣಗೊಂಡಿದ್ದ ತಡೆಗೋಡೆ ಕಾಮಗಾರಿ ಕುಸಿದು ಬಿದ್ದಿದೆ.

ಭಾರೀ ಮಳೆ : ದಕ್ಷಿಣ ಕನ್ನಡ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,

ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ: ಧರೆಗುರುಳಿದ ವಿದ್ಯುತ್ ಕಂಬ

ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ
How Can We Help You?