ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ. ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿಯಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಶೆಟ್ಟಿ ಮತ್ತು
ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಅಂಗಳಕ್ಕೆ ಬಂದಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ
ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು ಸಾಂತ್ವನ ಹೇಳಿದ್ದು ಸರಕಾರದಿಂದ ತಕ್ಷಣ ಪರಿಹಾರದ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.
ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ. ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಸ್ಥಳಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿನೇಶ್ ಕಂಗ್ಲಾಯಿ, ಪಿಡಿಓ ರಕ್ಷಿತಾ, ವಿಎ ಅನಿಲ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದರು.
ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ. ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿತ್ತು. ಎಂದಿನಂತೆ ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಚಾಲಕ ರಾಜು
ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಪ್ಪಳಿಗೆಯ ಸಿಂಗಾಣಿಯ ಕಮಲ ಎಂಬaವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ತಕ್ಷಣ
ದಿಲ್ಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆ ಬಂದಿದೆ. ಸುತ್ತಣ 12 ರಾಜ್ಯಗಳಲ್ಲಿ ತುಂತುರು ಮಳೆ ಬಂದಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಭಾರತದ ಕೆಲವೆಡೆ ಹವಾಮಾನ ಬದಲಾವಣೆ ಕಂಡಿದೆ. ಮಳೆಯೊಂದಿಗೆ 50 ಕಿಮೀ ವೇಗದಲ್ಲಿ ಗಾಳಿಯೂ ಬೀಸಲಿದೆ; ಬೀಳುತ್ತಿದೆ. ದಿಲ್ಲಿ, ಉತ್ತರ ಪ್ರದೇಶದ ಆಲಿಗಡ, ಆಗ್ರಾ, ಮಥುರಾ, ಹಿಮಾಚಲ ಪ್ರದೇಶದ ಉದ್ದಗಲಕ್ಕೂ ಗಾಳಿ ಮಳೆ ರುದ್ರ ನರ್ತನ
ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರಾಶಾಹಿಯಾಗಿರುವ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.
ಮೂಡುಬಿದಿರೆ : ನಿರಂತರ ಸುರಿದ ಮನೆಯಿಂದಾಗಿ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯರ್ ಪುಂಡ್ ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ತೋಟಕ್ಕೆ ನುಗ್ಗಿದೆ. ಕಾಯರ್ ಪುಂಡ್ ಕಾಲನಿಯಲ್ಲಿ ಮಳೆಯ ನೀರು ಹರಿದು ಹೋಗಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರು ರಸ್ತೆಯಲ್ಲಿ ತುಂಬಿಕೊಂಡು ತೋಟಗಳಲ್ಲಿ ತುಂಬಿಕೊಂಡಿತ್ತು. ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪುತ್ತಿಗೆ ಪಂಚಾಯತ್ ತಕ್ಷಣ ಎಚ್ಚೆತ್ತುಕೊಂಡಿದೆ.ಪಂಚಾಯತ್ ಅಭಿವೃದ್ಧಿ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಯಲ್ಲಿ 121 ಮಿಲಿಮೀಟರ್ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಸರಾಸರಿ ಮಳೆಯ ವಿವರದ ಪ್ರಕಾರ ಉಡುಪಿ ನಗರದಲ್ಲಿ 131 ಮಿ.ಮೀ., ಬ್ರಹ್ಮಾವರದಲ್ಲಿ 106, ಬೈಂದೂರಿನಲ್ಲಿ 130, ಕುಂದಾಪುರದಲ್ಲಿ 85, ಕಾರ್ಕಳದಲ್ಲಿ 151, ಕಾಪುವಿನಲ್ಲಿ 126 ಮತ್ತು ಹೆಬ್ರಿಯಲ್ಲಿ 116 ಮಿ.ಮೀ. ಮಳೆ ದಾಖಲಾಗಿದೆ.