ಇಂದಿನಿಂದ 3 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ,
ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಗ್ಗೆ 5.30ರ ವೇಳೆಗೆ ಮಂಗಳೂರು ಹೊರವಲಯದಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬುವವರ ಮನೆಯ ಹಿಂಭಾಗವಿದ್ದ ಭಾರೀ ಗಾತ್ರದ ಗುಡ್ಡ ಮನೆಯ ಮೇಲೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಗಾಯವಾಗಿದೆ.ಘಟನೆಯಿಂದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು
ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದು, ನಿರ್ಮಾಣಗೊಂಡಿದ್ದ ತಡೆಗೋಡೆ ಕಾಮಗಾರಿ ಕುಸಿದು ಬಿದ್ದಿದೆ.
ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,
ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ