ಬೈಂದೂರು: ವೈಶಾಖದಲ್ಲಿ ನದಿಯಾಚೆಗಿನ ಮನೆಗೆ ತೆರಳಲು ದೋಣಿಯಲ್ಲಾದರೂ ಪ್ರಯಾಣಿಸ ಬಹುದಿತ್ತು. ಆದರೆ ಈಗ ಮಳೆಯಬ್ಬರ ಜೋರಿದೆ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟವು ಹೆಚ್ಚಿದೆ. ಕುದ್ರುವಿನಿಂದ ನಾವುಂದಕ್ಕೆ ಅಥವಾ ನಾವುಂದದಿಂದ ಕುದ್ರುವಿಗೆ ಹೋಗುವುದಾದರೂ ಹೇಗೆ ಎಂಬುದೇ ಯಕ್ಷಪ್ರಶ್ನೆ. ಬೇಸಗೆಯಿರಲಿ ಅಥವಾ ಮಳೆಗಾಲವಿರಲಿ ಅನೇಕ ವರ್ಷಗಳಿಂದ ಈ ಕುದ್ರುವಿನ
ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರಿ ಗ್ರಾಮಪಂಚಾಯತ್ ವ್ಯಾಪ್ತಿಯ ಸುಳ್ಸೆ ತಿರುವಿನಲ್ಲಿ ಎರಡು ಬೃಹತ್ ಗಾತ್ರದ ಮರ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಉರಳಿ ಬಿದ್ದು ಕೆಲ ಹೊತ್ತು ಸಂಚಾರ ವ್ಯತ್ಯಯ ಉಂಟಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯ ಯುವಕರು ಉರುಳಿ
ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದಿದ್ದಾರೆ.
ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ(52)ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ
ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲವಾಗಿದ್ದು ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .
ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ
ಕಾರ್ಕಳ : ಕಳೆದ ಮಾರ್ಚ್ ತಿಂಗಳಲ್ಲಿ ಕಾರ್ಕಳದಲ್ಲಿ ಬಹಳ ಅದ್ದೂರಿಯಾಗಿ ಕಾರ್ಕಳ ಉತ್ಸವ ಜರುಗಿದ್ದು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕಿನ ಮುಖ್ಯ ರಸ್ತೆಗಳು, ಚರಂಡಿ ಮೋರಿಗಳಿಗೆ ಕೋಟಿಗಟ್ಟಲೆ ರೂಪಾಯಿಗಳನ್ನು ಖರ್ಚು ಮಾಡಿ ಡಾಮರೀಕರ್ಣ ಮಾಡಲಾಗಿತ್ತು. ಇದೀಗ ಕಾರ್ಕಳದ ಮುಖ್ಯ ರಸ್ತೆಗಳಲ್ಲಿ ಒಳ ಚರಂಡಿಯ ತ್ಯಾಜ್ಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ಕಾರ್ಕಳ ಮುಖ್ಯ ರಸ್ತೆಯ ಡಾಮರು ಎದ್ದು ಹೊಂಡಗಳು ಬಿದ್ದು ಪಾದಾಚಾರಿಗಳಿಗೆ ಹಾಗೂ ವಾಹನ ಚಾಲಕರಿಗೆ ಹೋಗುವುದೇ ಒಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿದ ಪರಿಣಾಮ ಹಲವೆಡೆ ಹಾನಿ ಸಂಭವಿಸಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೂ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ನಗರದ ದೇರೆಬೈಲ್‌ನಲ್ಲಿ ವಾರ್ಡಿನ ಆಕಾಶಭವನದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.ಈ ವೇಳೆ ಮಾತನಾಡಿದ ಮೇಯರ್, ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ. ಅನುದಾನದಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಕಳೆದ ವರ್ಷ ಈ ಹೊಳೆಯಲ್ಲಿ ಕೊಚ್ಚಿಕೊಂಡು