Home Posts tagged highcourt

ಬೆಂಗಳೂರು : ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅನುಮತಿ ನೀಡಿದೆ.ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ

ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಬಿಜೆಪಿಗೆ

ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ ಹೆಸರಲ್ಲೇ ನಿರಂಕುಶ ಅಧಿಕಾರದ ಅಮಲು ಈಗ ಸ್ಪಷ್ಟವಾಗಿದೆ. ಅದಾನಿ, ಅಂಬಾನಿ ಮಂದಿ ಪ್ರಧಾನಿ ಕಚೇರಿಯಲ್ಲಿ ಧಾರಾಳವಾಗಿ ಸಿಗುತ್ತಾರೆ. ಜಾರಿ ನಿರ್ದೇಶನಾಲಯ ಪ್ರತಿಪಕ್ಷಗಳನ್ನು ಮಾತ್ರ

ತಮಿಳುನಾಡು ಸೇರದ ಜಯಲಲಿತಾ ಚಿನ್ನಾಭರಣ

ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು. ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು ಚಿನ್ನಾಭರಣ ಹಸ್ತಾಂತರಕ್ಕೆ ತಾತ್ಕಾಲಿಕ ತಡೆ ನೀಡಿದರು.

ಗೌರಿ ಲಂಕೇಶ್ ಕೊಲೆ ಆರೋಪಿ ನಾಯಕ್‌ಗೆ ನೋಟೀಸು

ಗೌರಿ ಲಂಕೇಶ್ ಕೊಲೆ ಆರೋಪಿ ಎನ್. ಮೋಹನ್ ನಾಯಕ್ ಹೈಕೋರ್ಟಿನಲ್ಲಿ ಜಾಮೀನು ಪಡೆದಿದ್ದುದರ ಸಿಂಧುತ್ವ ಪ್ರಶ್ನಿಸಿದ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ಆರೋಪಿ ನಾಯಕ್‌ಗೆ ನೋಟೀಸು ನೀಡಿತು. ಹೈಕೋರ್ಟ್ 2023ರ ಡಿಸೆಂಬರ್ 7ರಂದು ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು. ಕೂಡಲೆ ಗೌರಿ ತಂಗಿ ಕವಿತಾ ಲಂಕೇಶ್ ಸುಪ್ರೀಂನಲ್ಲಿ ಪ್ರಶ್ನಿಸಿದ್ದರು. ಆ ಸಂಬಂಧ ಜನವರಿಯಲ್ಲಿ ಆರೋಪಿಗೆ ಸುಪ್ರೀಂ ಕೋರ್ಟ್ ನೋಟೀಸು ನೀಡಿತ್ತು. ರಾಜ್ಯ ಸರಕಾರವೂ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿ

ದೆಹಲಿ : ಹೈಕೋರ್ಟ್‌ಗೆ ಮುಖ್ಯ ನ್ಯಾಯಾಧೀಶರಾಗಿ ಗುಜರಾತಿನ ಎನ್. ವಿ. ಅಂಜಾರಿಯಾ ನೇಮಕ

ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮುಖ್ಯ ನ್ಯಾಯಮೂರ್ತಿ ಆಯ್ಕೆಯನ್ನು ಸೂಚಿಸಿದೆ. ಗುಜರಾತ್ ರಾಜ್ಯದವರಾದ ಎನ್. ವಿ. ಅಂಜಾರಿಯಾ ಅವರು ಸದ್ಯ ಗುಜರಾತ್ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿ ಇದ್ದಾರೆ.