ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಅಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ಯಲ್ಲಿ ಬಂಧಿಸಿದ ಶ್ರೀಕಾಂತ್ ಪೂಜಾರಿ ಅವರನ್ನು ತಕ್ಷಣ ಬಿಡುಗಡೆ ಗೊಳ್ಳಿಸಬೇಕು ಇಲ್ಲವೇ ನಮ್ಮನ್ನು ಕೂಡ
ಕರಾವಳಿಯ ಭದ್ರತೆಗೆ ಸವಾಲೊಡ್ಡುವ ಭಯೋತ್ಪಾದಕತೆಯ ವಿರುದ್ಧ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾ ವಾಹಿನಿ ವತಿಯಿಂದ ಜನಜಾಗೃತಿ ಅಭಿಯಾನ ಮಂಗಳೂರು ನಗರ ಹಾಗೂ ನಗರದ ಹೊರವಲಯದ ಪ್ರದೇಶಗಳಲ್ಲಿ ನಡೆಯಿತು.ಮಂಗಳೂರಿನ ಜ್ಯೋತಿ ವೃತ್ತ, ಉರ್ವಸ್ಟೋರ್, ಕಾವೂರು, ಮೂಡಬಿದ್ರೆ, ತೊಕ್ಕೊಟ್ಟು, ಗುರುಪುರ ಕೈಕಂಬ, ಸುರತ್ಕಲ್ ನಲ್ಲಿ ಅಭಿಯಾನ ನಡೆಯಿತು. ಇಸ್ಲಾಮಿಕ್ ಭಯೋತ್ಪಾದನೆ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಘೋಷಣೆ ಕೂಗಿದರು. ಮಂಗಳೂರಿನ ಜ್ಯೋತಿ ಬಳಿ ನಡೆದ
ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ ಅನ್ಯಧರ್ಮದ ಹುಡಗನೊಬ್ಬ ಚೈತ್ರಾ ಕುಂದಾಪುರ ಅವರ ಬಗ್ಗೆ ಅವಹೇಳನಕಾರಿ ವ್ಯಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆ ಆ ಹುಡುಗ ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಜಗಳ ನಡೆದಿತ್ತು. ಘಟನೆಯ ಬಳಿಕ ಹಿರಿಯರ ನೇತೃತ್ವದಲ್ಲಿ ನಗರ
ಹಿಂದು ಜಾಗರಣಾ ವೇದಿಕೆ ನಂದಿಕೂರು ಘಟಕದ ಉಡುಪಿಯಲ್ಲಿ ನಡೆಯಲಿರುವ ಭಾರತ ಮಾತಾ ಪೂಜನಾ ಕಾರ್ಯಕ್ರಮ ಮತ್ತು ದುರ್ಗಾ ದೌಡ್ ಪೂರ್ವಭಾವಿಯಾಗಿ ವಿಶೇಷ ಬೈಠಕ್ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಪ್ರತೀಕ್ ಕೋಟ್ಯಾನ್ ನವರ ನಂದಿಕೂರಿನ ಮನೆಯಲ್ಲಿ ನಡೆಯಿತು. ಈ ಸಂದರ್ಭ ನಾಗರಾಜ ಭಟ್ ರವರು ಕಾಶಿ,ಅಯೋಧ್ಯೆ ಕ್ಷೇತ್ರ ಸಂದರ್ಶಿಸಿ ತಂದಿದ್ದ ಪವಿತ್ರವಾದ ತೀರ್ಥಪ್ರಸಾದವನ್ನು ಸದಸ್ಯರಿಗೆ ನೀಡಿ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಕುಂದಾಪುರ ತಾಲೂಕು ಗಂಗೊಳ್ಳಿಯಲ್ಲಿ ಗೋವು ಕಳ್ಳತನದ ವಿರುದ್ಧ ಹಿಂದು ಜಾಗರಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. ಹಿಂದುಗಳ ಧಾರ್ಮಿಕ ನಂಬಿಕೆಗಳ ಪ್ರಕಾರ ಗೋವು ಆರಾಧ್ಯ ದೇವತೆ ಯಾಗಿದ್ದು ಗೋಮಾತೆ ಎಂದು ಕರೆಯಲ್ಪಡುತ್ತದೆ, ಅಂತಹ ಗೋಮಾತೆಯನ್ನು ಹಿಂಸಾತ್ಮಕವಾಗಿ ಕೊಂದು ಅದನ್ನು ಚಿತ್ರಿಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಹಿಂದುಗಳ ಭಾವನೆಗಳನ್ನು ಕೆರಳಿಸುವ ಕೆಲಸ ನಡೆಯುತ್ತಿದೆ. ಹಲವಾರು ಬಾರಿ ದೂರು ನೀಡಿದರೂ
ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್‍ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು
ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು. ಅಲ್ಲದೆ, ಉಗ್ರ ಪ್ರತಿಭಟನೆಗೆ ನಿರ್ಧರಿಸಲಾಗಿತ್ತು. ಪೊಲೀಸ್ ಇಲಾಖೆಯ ಮನವಿ ಮೇರೆಗೆ ಪ್ರತಿಭಟನೆ ಕೈ
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಮತ್ತು ಉಗ್ರಾಗಾಮಿಗಳ ಕೃತ್ಯದ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣದ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಗಣರಾಜ್ ಭಟ್ ಕೆದಿಲ ಅವರು ಮಂಗಳೂರಿನಲ್ಲಿ ಈವರೆಗೆ ನಡೆದಿರುವ ಎಲ್ಲಾ ಭಯೋತ್ಪಾದಕ ಚಟುವಟಿಕೆಗಳು ಮತ್ತು ಕೇರಳ ಮತ್ತು ಭಟ್ಕಳ ನಂಟು
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ