ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ
ರಾಜ್ಯ ಸರಕಾರ ಮೀನುಗಾರರಿಗಾಗಿ ಬಜೆಟ್‍ನಲ್ಲಿ ಪ್ರಕಟಿಸಿದ ಒಂದು ಯೋಜನೆಯೂ ಜಾರಿಗೆ ತರದೆ ಮೀನುಗಾರ ಸಮುದಾಯವನ್ನು ಕಡೆಗಣಿಸಿದೆ. ಈಗಾಗಲೇ ಮೀನುಗಾರ ಮುಖಂಡರು ಬೆಂಗಳೂರಿಗೆ ತೆರಳಿ ತಮ್ಮ ಸಮಸ್ಯೆಯನ್ನು ಸರಕಾರ ಮುಂದೆ ಇಟ್ಟಿದ್ದಾರೆ. ಇದಕ್ಕೆ ಸ್ಪಂದಿಸದಿದ್ದರೆ ಮೀನುಗಾರರ ಜತೆ ಸೇರಿ ಕಾಂಗ್ರೆಸ್ ಪಕ್ಷವೂ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಉಪಾಕ್ಷ ಐವನ್ ಡಿಸೋಜಾ ಎಚ್ಚರಿಕೆ ನೀಡಿದ್ದಾರೆ.