ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ’ ಸಾಯಿರಾಧ’, ಸಂತೋಷ್ ಶೆಟ್ಟಿ
ಬಂಟ್ವಾಳ ತಾಲೂಕಿನ ಅನಿಲ್ ಜಾನ್ ಸಿಕ್ವೇರಾ ತನ್ನ 25ನೇ ವಯಸ್ಸಿನಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಕರಾವಳಿ ಜಿಲ್ಲೆಯ ಅನಿಲ್ ಅಪರೂಪದ ಸಾಧಕರಾಗಿ ಗುರುತಿಸಲ್ಪಟ್ಟಿದ್ದಾರೆ. ಅನಿಲ್ ಜಾನ್ ಸಿಕ್ವೇರಾ ಅವರು ಪ್ರಿಲಿಮ್ಸ್, ಮೇನ್ಸ್ ಹಾಗೂ ಸಂದರ್ಶನ ಹೀಗೆ 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಸಿವಿಲ್ ನ್ಯಾಯಧೀಶರಾಗಿ
ಇದೇ ಫೆಬ್ರವರಿ 24ರಂದು ನಿವೃತ್ತರಾಗುವ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಕನ್ನಡಿಗರೆ ಆದ ದಿನೇಶ್ ಕುಮಾರ್ ಅವರ ಜಾಗಕ್ಕೆ ಎನ್. ವಿ. ಅಂಜಾರಿಯಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ಮುಖ್ಯ ನ್ಯಾಯಮೂರ್ತಿ ಆಯ್ಕೆಯನ್ನು ಸೂಚಿಸಿದೆ. ಗುಜರಾತ್ ರಾಜ್ಯದವರಾದ ಎನ್. ವಿ. ಅಂಜಾರಿಯಾ ಅವರು ಸದ್ಯ ಗುಜರಾತ್ ಹೈಕೋರ್ಟಿನಲ್ಲಿ ನ್ಯಾಯಾಧೀಶರಾಗಿ ಇದ್ದಾರೆ.