ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್