ಕಡಬ: ಸವಾರನ ನಿಯಂತ್ರಣ ತಪ್ಪಿದ ಬೈಕೊಂದು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್
ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂಟ ಅಶೋಕ್ ರಾಯನ್ ಕ್ರಾಸ್ತ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ
ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆಯ ಅಮೂಲ್ಯ ವಸ್ತುಗಳು ಸುಟ್ಟು ಹೋದ ಘಟನೆ ಆಲಂಕಾರಿನಲ್ಲಿ ನಡೆದಿದೆ. ಆಲಂಕಾರು ಗ್ರಾಮದ ನೆಕ್ಕಿಲಾಡಿ ವಿನೋದಾ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಮನೆ ಒಳಗಡೆಯಿದ್ದ ವಿದ್ಯುತ್ ಉಪಕರಣಗಳು, ಬಟ್ಟೆ ಸೇರಿದಂತೆ ಚಿನ್ನದ ಒಡವೆಗಳು ಬೆಂಕಿಗೆ ಆಹುತಿಯಾಗಿದೆ. ಪತಿ ಮೃತಪಟ್ಟ ಬಳಿಕ ವಿನೋದಾ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸಿಸುತಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆ ತೆರಳಿದ್ದರು.
ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ 6 ವರುಷಗಳಿಂದ ವಾಸವಾಗಿದ್ದ ವೃದ್ಧ ದಂಪತಿಗಳ ಮನೆಯನ್ನು ಏಕಏಕಿಯಾಗಿ ಮಂಗಳವಾರ ಬೆಳ್ಳಂಬೆಳಗೆ ಪೊಲೀಸರ ಸಹಾಯದೊಂದಿಗೆ ಕಡಬದ ಕಂದಾಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ನಡೆದಿದೆ.ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ವಾಸವಾಗಿರುವ ರಾಧಮ್ಮ ಮತ್ತು ಮುತ್ತುಸ್ವಾಮಿ ವೃದ್ಧ ದಂಪತಿಗಳಿಗೆ ಸೇರಿದ ಮನೆಯಾಗಿದೆ.ದಂಪತಿ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿಯವರು. ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ
ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿನಿಯರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಮಕ್ಕಳಲ್ಲಿ ಮನೋಧೈರ್ಯ ಜಾಸ್ತಿ ಇದೆ. ಒಮ್ಮೆ ಕನ್ನಡ ಪರೀಕ್ಷೆ
ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ
ಕೋಡಿಂಬಾಳ ದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ ( 62 ವ) ಆತ್ಮಹತ್ಯೆ ಮಾಡಿಕೊಂಡವರು. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ. ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ
ಓಮ್ನಿ ಹಾಗೂ ಕ್ರೆಟಾ ಕಾರು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರ ಶನಿವಾರ ಮಧ್ಯಾಹ್ನ ನಡೆದಿದೆ. ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53) ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್
ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.23ನೇ ಕಡಬ ಗ್ರಾಮದ ಮುಳಿಮಜಲು ಎಂಬಲ್ಲಿ ಸಂಜೆ ನಡೆಯಲಿದೆ ಎಂದು ಟೀಮ್‌ಸಾರಂಗ್ ಮುಖಂಡ ಹರೀಶ್ ರೈ ಮೈಲೇರಿ ತಿಳಿಸಿದರು. ಅವರು ಕಡಬ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ
ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ ತಿಮ್ಮಪ್ಪ ಗೌಡ (೭೦) ಎಂದು ಗುರಿತಿಸಲಾಗಿದೆ. ಇವರು ರಬ್ಬರ್ ಟ್ಯಾಪರ್ ಆಗಿದ್ದು, ಇತ್ತೀಚೆಗೆ ಕೊಲ್ಯದ ರೊಟ್ಟಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಮಕ್ಕಳಿಲ್ಲದ ಪರಿಣಾಮ ಅದೇ ಕೊರಗಿನಲ್ಲಿ