ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು.
ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ
ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಹೇಳಿದರು. ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಒಂಟಿ ಮಹಿಳೆ ಮನೆಯಲ್ಲಿ ಒಬ್ಬರೇ
ಕಡಬ: ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ರೈಲು ಇಂಜಿನ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ನೆಟ್ಟಣದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಗಂಭೀರ ಗಾಯಗೊಂಡ ವ್ಯಕ್ತಿ. ರೈಲು ಇಂಜಿನ್ ಢಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಂಗಳೂರಿನಲ್ಲಿ
ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್ಟೇಕ್ ಮಾಡುವಾಗ ಹೊಡೆದು ಮುಂದೆ ಸಾಗಿದ್ದು, ಅಪಾಯವನ್ನರಿತ ಬಸ್ ಚಾಲಕ ರಸ್ತೆಯಿಂದ ಬಸ್ಸನ್ನು ಕೆಳಗಿಳಿಸಿ ನಿಯಂತ್ರಿಸಿದ
ಕಡಬ,: ಕಾಂಗ್ರೆಸ್ ಪಕ್ಷದ ಬಿಳಿನೆಲೆ ವಲಯದ ಮಾಜಿ ಅಧ್ಯಕ್ಷ, ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ್ ಗೋಳ್ಯಾಡಿ ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷ ವಿರೋದಿ ಚಟುವಟಿಕೆಯ ನಡೆಸಿದ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‍ಕುಮಾರ್ ಶೆಟ್ಟಿ ಬಿಳಿನೆಲೆ ಅವರು ತಿಳಿಸಿದ್ದಾರೆ. ಅವರು ಕಡಬ ಬ್ಲಾಕ್ ಕಾಂಗ್ರೆಸ್
ಕಡಬ ತಾಲೂಕು ತಹಶೀಲ್ದಾರ್ ಬಿ ಅನಂತಶಂಕರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುರಸಭಾ ತಹಶೀಲ್ದಾರ್, ಜಿಲ್ಲಾಧಿಕಾರಿ ಕಚೇರಿ ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ರಮೇಶ್ ಬಾಬು ಟಿ., ತಹಶೀಲ್ದಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಯವರಿಂದ ಅನುಮೋದಿತವಾಗಿರುವ ಕರ್ನಾಟಕ ರಾಜ್ಯಪಾಲ ಆದೇಶಾನುಸಾರ ಜಿ ಎನ್ ಸುಶೀಲಾ, ಸರಕಾರ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ ಇವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತುಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.ಕಡಬ
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08
ಕಡಬ ತಾಲೂಕಿನ ಗೋಳಿ ತೊಟ್ಟು ಗ್ರಾಮದ ಆರಂತಬೈಲು ಎಂಬಲ್ಲಿ ನಿನ್ನೆ ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನ ಹಾಗೂ 8 ಸಾವಿರ ರೂ ನಗದು ಸೇರಿ ಒಟ್ಟು 5.30 ಲಕ್ಷ ಮೌಲ್ಯದ ವಸ್ತುವನ್ನು ದೋಚಿ ಪರಾರಿಯಾಗಿದ್ದಾರೆ.ಮನೆಯ ಮಾಲೀಕ ರಮ್ಲತ್ ಹಾಗೂ ಅವರ ಪತ್ನಿ ಖತೀಜಮ್ಮ ರವರು ದುಬೈಯಿಂದ ಬರುವ ತಮ್ಮ ಪುತ್ರನನ್ನು ಕರೆ ತರಲು ನಿನ್ನೆ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ವಾಪಸ್ ತಡರಾತ್ರಿ ಮನೆಗೆ ಬಂದ […]