Home Posts tagged #kadaba (Page 12)

ಕಡಬ: ಮದರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚು ನಾಯಿ ಕಡಿತ

ಕಡಬ: ಹುಚ್ಚುನಾಯಿಯೊಂದು ಕಡಿದ ಪರಿಣಾಮ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಿಗ್ಗೆ ತಮ್ಮ ಮನೆ ಸಮೀಪದ ಕೆರೆಗೆ ತಾವರೆ ಹೂವಿನ ಗಿಡ ಹಾಕಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ

ಸೆಲ್ಫಿ ತೆಗೆಯಲು ನದಿಗೆ ಇಳಿದ ಯುವಕ ನೀರುಪಾಲು

ಕಡಬ: ವಾಹನ ನಿಲ್ಲಿಸಿ ನದಿಯ ಬಂಡೆಯಲ್ಲಿ ಸೆಲ್ಫೀ ತೆಗೆಯಲು ಮುಂದಾದ ಯುವಕನೋರ್ವ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ, ಗುಂಡ್ಯ ಸಮೀಪದಲ್ಲಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಆಟೋಮೊಬೈಲ್ ಸ್ಪೇರ್‍ಪಾಡ್ಸ್ ಪಾರ್ಸಲ್ ಸಾಗಾಟದಟೆಂಪೊವಾಹನವನ್ನು ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ

ಕಡಬ ತಾಲೂಕು ಯುವಜನ ಒಕ್ಕೂಟದ ಪದಗ್ರಹಣ

ಕಡಬ: ನಮ್ಮದು ಅತೀ ಹೆಚ್ಚು ಸಂಖ್ಯೆಯಲ್ಲಿ ಯುವಜನರನ್ನು ಹೊಂದಿರುವ ದೇಶ. ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಪ್ರಮುಖವಾದುದು. ಆದುದರಿಂದ ಯುವಜನರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ಸಂಘಟನಾತ್ಮಕವಾಗಿ ಬಲಗೊಳ್ಳಬೇಕು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ನುಡಿದರು. ಅವರು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ಜರಗಿದ ಕಡಬ ತಾಲೂಕು ಯುವಜನ ಒಕ್ಕೂಟದ ಪದಾದಿಕಾರಿಗಳ ಪದಗ್ರಹಣ ಸಮಾರಂಭವನ್ನು

ಯಶಸ್ವಿ `ಆಪರೇಷನ್ ಚೀತಾ’ ಕಾರ್ಯಾಚರಣೆ

ಕಡಬ : ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆ ಬಳಿಯ ಬಾವಿಯ ದಂಡೆಯ ಮೇಲೆ ಕುಳಿತಿದ್ದ ಕೋಳಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ . ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬಂದಿಗಳು ಸುಳ್ಯ ಎಸಿಎಫ್ ಪ್ರವೀಣ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸತತ 3 ತಾಸುಗಳ ಕಾರ್ಯಾಚರಣೆ ನಡೆಸಿಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲೆತ್ತುವ ಯಶಸ್ವಿಯಾಗಿದ್ದಾರೆ . ಬಾವಿಯ

ಕಡಬದ ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆ

ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಅರಣ್ಯ ಇಲಾಖೆಯಿಂದ ಆರಂಭಗೊಂಡಿದೆ.

ಕುಕ್ಕೆ ದೇವಳಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ

ಕಡಬ: ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಶ್ರೀ ದೇವರ ದರುಶನ ಪಡೆದು ಸಂಕಲ್ಪ ನೆರವೇರಿಸಿ ವಿಶೇಷ ಸೇವೆ ಸಮರ್ಪಿಸಿದರು. ಶ್ರೀ ದೇವಳದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಸಚಿವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ

ಹಾವು ಮತ್ತು ಇಲಿ : ಫೈಟ್ ಫೈಟ್‍ನಲ್ಲಿ ಗೆದ್ದ ಇಲಿರಾಯ

ಕಡಬ : ಸಾಮಾನ್ಯವಾಗಿ ಹಾವು ಇಲಿಯನ್ನು ತಿನ್ನುವುದನ್ನು ಕೇಳಿದ್ದೇವೆ , ನೋಡಿದ್ದೇವೆ . ಆದರೆ ಇಲ್ಲೊಂದು ಹಾವು ಇಲಿ ಫೈಟ್‍ನಲ್ಲಿ ಇಲಿಯೇ ಹಾವನ್ನು ಹಿಡಿದಳೆದು ನುಂಗಲು ಪ್ರಯತ್ನಪಡುವ ವೀಡಿಯೋವೊಂದು ವೈರಲ್ ಆಗಿದೆ . ಇದು ನಡೆದದ್ದು ಕಡಬ ಸಮೀಪದ ಕಳಾರದಲ್ಲಿ ಇಲ್ಲಿನ ಗಣೇಶ್ ಸ್ಟೋರ್ ಸಮೀಪ ಹಾವು ಮತ್ತು ಇಲಿಯ ಪೈಟ್‍ನಲ್ಲಿ ಕೊನೆಗೆ ಇಲಿಯೇ ಹಾವನ್ನು ಕಚ್ಚಿ ಎಳೆದಾಡುವ ದೃಶ್ಯ ಕಂಡು ಬಂದಿದೆ . ಈ ವಿಶ್ವಯವನ್ನು ಮೊಬೈಲ್‍ನಲ್ಲಿ ಸೆರೆಹಿಡಿಯಲಾಗಿದೆ .

ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸತಾಯಿಸಬಾರದು ಲೋಕಾಯುಕ್ತ ಉಪ ಅಧೀಕ್ಷಕ ಚೆಲುವರಾಜು ಹೇಳಿಕೆ

ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್‌ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಭ್ರಷ್ಟಚಾರ ರಹಿತ ಕೆಲಸ ಮಾಡಬೇಕು, ಲಂಚ

ಕಡಬ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಎಡಮಂಗಳ ಸಮೀಪ  ಸಂಭವಿಸಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ ಚಲಿಸಿದ ವೇಳೆ ಸಮಸ್ಯೆಯು ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು