ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು
ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು
ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ ಮಕ್ಕಳೊಂದಿಗೆ ವ್ಯಕ್ತಿಯೊಬ್ಬ ದಾರಿಯಲ್ಲಿ ಬಂದಿದ್ದು, ಮಕ್ಕಳು ಮಾಸ್ಕ್ ಧರಿಸಿರಲಿಲ್ಲ
ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್‌ಐ ರುಕ್ಮನಾಯ್ಕ್ ಹಾಗೂ
ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು
ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ
ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ