Home Posts tagged #kadaba (Page 13)

ಕಡಬದಲ್ಲಿ ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : 40 ಕೆಜಿ ದನದ ಮಾಂಸ ಸಹಿತ ಓರ್ವನ ವಶಕ್ಕೆ

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ

ಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ  ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಂಡ ಗುಂಡಿ ಮುಚ್ಚಿ ಹಾಕಿ ತಾಯಿ ಮಗಳ ಸಾಮಾಜಿಕ ಕಾಳಜಿ

ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ.       ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು

ಉಳ್ಳವರು ಸಮಾಜಕ್ಕೆ ಕೊಡುಗೆ ನೀಡಬೇಕು: ಸಚಿವ ಅಂಗಾರ ಅಭಿಮತ

ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ

ಸುಬ್ರಹ್ಮಣ್ಯದಲ್ಲಿ ಸರಕಾರಿ ಬಸ್-ಕಾರು ಮಧ್ಯೆ ಅಪಘಾತ

ಕಡಬ: ಸರಕಾರಿ ಬಸ್ ಹಾಗೂ ಕಾರೊಂದರ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಬಳಿ ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಹಾಸನದವರಿದ್ದ ಕಾರು ಕೈಕಂಬ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಾಸನದ ಚಾಲಕ ಪುಟ್ಟರಾಜು, ಜಯಂತಿ, ಲೀಲಾ ಎಂಬವರು ಸಣ್ಣ ಪುಟ್ಟ

ಕಡಬದ ಪೆರಾಬೆಯಲ್ಲಿ ಅನುಮಾನಸ್ಪದ ವ್ಯಕ್ತಿಯ ಬಂಧನ

ಕಡಬ ತಾಲೂಕಿನ ಪೆರಾಬೆ ಗ್ರಾಮದ ಮಾರ್ ಇವಾನಿಯೋಸ್ ಮಹಿಳಾ ಬಿಎಡ್ ಕಾಲೇಜಿನ ಕಟ್ಟಡದ ಹಿಂಬದಿಯಲಲ್ಲಿ ಮುಖಕ್ಕೆ ಬಟ್ಟೆಯನ್ನು ಕಟ್ಟಿ ವ್ಯಕ್ತಿಯ ಗುರುತು ಸಿಗದಂತೆ ಅಡಗಿ ಕುಳಿತುಕೊಂಡೊಬ್ಬನನ್ನು, ರಾತ್ರಿ ಗಸ್ತು ತಿರುಗುತ್ತಿದ್ದ ಕಡಬ ಠಾಣೆಯ ಸಹಾಯಕ ಉಪನರೀಕ್ಷಕರಾದ ಸುರೇಶ್ ಸಿಟಿಯವರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಶರತ್ (34) ಮರವೂರು, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಕಡಬ ಠಾಣೆಯ ಸಿಬ್ಬಂದಿಗಳು ಈ ಮಾರ್ಗವಾಗಿ ಗಸ್ತು ತಿರುಗುತ್ತಿದ್ದ

ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ವನ ಸಂವರ್ಧನಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮ ಜರಗಿತು. ಶ್ರೀ ಕ್ಷೇತ್ರದಲ್ಲಿ ಪರಿಸರ ಸಂರಕ್ಷಣೆ ಸಂಬಂಧವಾಗಿ ಪ್ರಸ್ತಾಪಿತ ರಸ್ತೆಗಳ 14 ವಿವಿಧ ಕಡೆಗಳಲ್ಲಿ ಏಕಕಾಲದಲ್ಲಿ ವಿವಿಧ ಸಸ್ಯಗಳನ್ನು ನೆಡುವ ಬೃಹತ್ ವನ ಸಂವರ್ಧನಾ ಕಾರ್ಯಕ್ರಮವನ್ನು ಶ್ರೀ ದೇವಳದ ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ 14 ಕಡೆ ಏಕ ಕಾಲದಲ್ಲಿ ಗಿಡ ನೆಟ್ಟು ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮಾದರಿಯಾದ

ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ‌ ದಿನಾಚರಣೆ:ಪತ್ರಿಕಾ ವಿತರಕ ಬಾಲಕೃಷ್ಣ ರೈ ಗೆ ಸನ್ಮಾನ

ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಕಡಬ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಬ ಠಾಣಾ ಉಪನಿರೀಕ್ಷಕ ರುಕ್ಮನಾಯ್ಕ್, ಕಡಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಭಾಗವಹಿಸಿದ್ದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ. ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಪತ್ರಿಕಾ ವಿತರಣಾ ಕ್ಷೇತ್ರದಲ್ಲಿನ ಸೇವೆಗಾಗಿ ಪತ್ರಿಕಾ ವಿತರಕ ಬಾಲಕೃಷ್ಣ ರೈ ಅವರನ್ನು

ಸುಬ್ರಹ್ಮಣ್ಯ-ಗುಂಡ್ಯ ರಸ್ತೆಯಲ್ಲಿ ವಾಹನ ಅಟ್ಟಾಡಿಸಿದ ಕಾಡಾನೆ

ಕಡಬ:ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.

ಕಡಬ: ಇಲಿ ಜ್ವರಕ್ಕೆ ಯುವಕ ಬಲಿ

ಕಡಬ ತಾಲೂಕು ಐತ್ತೂರು ಗ್ರಾಮದ ಯುವಕನೊಬ್ಬ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ.  ಪಂಜೋಡಿ ನಿವಾಸಿ ಶಿವಪ್ಪ ಗೌಡರ ಪುತ್ರ ಮೋಹಿತ್ (19) ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಯುವಕ.ಕಳೆದ ಕೆಲವು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ