Home Posts tagged #kadaba (Page 2)

ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಸತಾಯಿಸಬಾರದು ಲೋಕಾಯುಕ್ತ ಉಪ ಅಧೀಕ್ಷಕ ಚೆಲುವರಾಜು ಹೇಳಿಕೆ

ಕಡಬ: ಸಾರ್ವಜನಿಕರಿಗೆ ನಿಷ್ಪಕ್ಷಪಾತ ಸೇವೆ ನೀಡುವುದೇ ಅಧಿಕಾರಿಗಳ ಕೆಲಸ, ಯಾವುದೇ ಕಾರಣಕ್ಕೆ ಸಾರ್ವಜನಿಕರನ್ನು ಸತಾಯಿಸಬಾರದು ಎಂದು ಕರ್ನಾಟಕ ಲೋಕಾಯುಕ್ತ ಪೋಲಿಸ್‌ನ ದ.ಕ. ಜಿಲ್ಲಾ ಉಪ ಅಧೀಕ್ಷಕ ಚೆಲುವರಾಜು ಅವರು ಹೇಳಿದರು ಅವರು ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಪೋಲಿಸರಿಂದ ನಡೆದ ಅರಿವು ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ

ಕಡಬ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ಅವಘಡ

ಕಡಬ: ರೈಲು ಹಳಿಯಲ್ಲಿ ಬಿರುಕು ಬಿಟ್ಟ ಘಟನೆ ನಡೆದಿದ್ದು ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಾರೀ ಅವಘಡ ತಪ್ಪಿದ ಘಟನೆ ಸುಬ್ರಹ್ಮಣ್ಯ-ಮಂಗಳೂರು ರೈಲ್ವೇ ರಸ್ತೆಯ ಎಡಮಂಗಳ ಸಮೀಪ  ಸಂಭವಿಸಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣ ದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದ ವೇಳೆಯಲ್ಲಿ, ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿದೆ. ರೈಲಿನ ಒಂದು ಬೋಗಿ ಚಲಿಸಿದ ವೇಳೆ ಸಮಸ್ಯೆಯು ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು

ಕಡಬದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ವಸ್ತುಗಳು ಬೆಂಕಿ ತಗುಲಿ ಹಾನಿಗೊಳಗಾಗಿದೆ. ಕೊಠಡಿಯಲ್ಲಿದ್ದ ಮೂರು ಕ್ವೀಂಟಾಲ್ ಗೂ ಅಧಿಕ ರಬ್ಬರ್, ಒಂದು ಸಾವಿರ ತೆಂಗು, ಅಡಿಕೆ, ಕರಿ ಮೆಣಸು, ಪೈಪ್, ಇತರೆ ಸಾಮಾಗ್ರಿಗಳು

ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ

ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ಧ ಅತ್ಯಾಚಾರ ಆರೋಪ : ಕಡಬ ಠಾಣೆಗೆ ಮತ್ತು ನೀತಿ ತಂಡದಿಂದ ಮುಖ್ಯ ಮಂತ್ರಿಗಳಿಗೆ ದೂರು

ಕಡಬ :  ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಸಂಬಂಧಿಕರ ಮನೆಯಲ್ಲಿ ಪತ್ತೆ

ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು

ಕಡಬದಲ್ಲಿ ಪೊಲೀಸ್ ಜೀಪು ಹಾಗೂ ಬೊಲೆರೋ ನಡುವೆ ಢಿಕ್ಕಿ: ಎಸ್.ಐ ಸಹಿತ ಹಲವರು ಅಪಾಯದಿಂದ ಪಾರು

ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ : ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸ್ಥಳೀಯರು

ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ ಮಕ್ಕಳೊಂದಿಗೆ ವ್ಯಕ್ತಿಯೊಬ್ಬ ದಾರಿಯಲ್ಲಿ ಬಂದಿದ್ದು, ಮಕ್ಕಳು ಮಾಸ್ಕ್ ಧರಿಸಿರಲಿಲ್ಲ